ಕರ್ನಾಟಕ

karnataka

ETV Bharat / state

ಪರಿಷತ್​​ ಚುನಾವಣೆ.. ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದ ಲಖನ್​ ಜಾರಕಿಹೊಳಿ - ಲಖನ್​ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್​ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.

lakhan jarkiholi submitted nomination as independent candidate
ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

By

Published : Nov 23, 2021, 3:37 PM IST

ಬೆಳಗಾವಿ:ಬಿಜೆಪಿಯಿಂದ ವಿಧಾನ ಪರಿಷತ್​ ಚುನಾವಣೆಗೆ ಟಿಕೆಟ್​ ಸಿಗದ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ನಗರದ ಛತ್ರಪತಿ ಶಿವಾಜಿ ಮಹಾರಾಜ್ ಹಾಗೂ ಜಗಜ್ಯೋತಿ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಆರಂಭಿಸಿದ ಲಖನ್ ಜಾರಕಿಹೊಳಿ, ತೆರೆದ ವಾಹನದಲ್ಲಿ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿದರು.

ಲಖನ್ ಜಾರಕಿಹೊಳಿ ಅವರು ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಗ್ರಾಮ ಪಂಚಾಯತ್, ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.

ಲಖನ್‌ ಜಾರಕಿಹೊಳಿ‌

ವಿಧಾನಪರಿಷತ್ ಸದಸ್ಯ ವಿವೇಕರಾವ್ ಪಾಟೀಲ್, ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ ಸೇರಿದಂತೆ ಅನೇಕರು ಲಖನ್​ ಜಾರಕಿಹೊಳಿಯವರಿಗೆ ಸಾಥ್ ನೀಡಿದರು.

ಇದನ್ನೂ ಓದಿ:ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಹೇಳುತ್ತಿದ್ದಂತೆ ಥೂ.. ಥೂ.. ಎಂದು ಗೇಲಿ ಮಾಡಿದ ರಮೇಶ್ ಜಾರಕಿಹೊಳಿ‌

ABOUT THE AUTHOR

...view details