ಕರ್ನಾಟಕ

karnataka

ETV Bharat / state

ಡಿಕೆಶಿ ಜೊತೆಗೆ ಸವದಿ ನಿಕಟ ಸಂಪರ್ಕದಲ್ಲಿದ್ದಾರೆ, ಮುಂದೆ ಕಾಂಗ್ರೆಸ್​​​ಗೆ ಹೋಗಲಿದ್ದಾರೆ: ಲಖನ್ ಜಾರಕಿಹೊಳಿ‌ ಹೊಸ ಬಾಂಬ್​ - ಎಂಎಲ್​ಸಿ ಲಖನ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿರುವ ಮಾಹಿತಿ ನನ್ನ ಬಳಿ ಇದೆ. ಎಷ್ಟು ಬಾರಿ ಮಾತನಾಡಿದ್ದಾರೆ, ಎಲ್ಲೆಲ್ಲಿ ಭೇಟಿಯಾಗಿದ್ದಾರೆ ಎಲ್ಲಾ ವಿಚಾರಗಳು ನನಗೆ ಗೊತ್ತಿವೆ ಎಂದು ವಿಧಾನ ಪರಿಷತ್​ ಸದಸ್ಯ ಲಖನ್ ಜಾರಕಿಹೊಳಿ‌ ಹೊಸ ಬಾಂಬ್​ ಸಿಡಿಸಿದ್ದಾರೆ.

ಎಂಎಲ್​ಸಿ ಲಖನ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಎಂಎಲ್​ಸಿ ಲಖನ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

By

Published : Jan 27, 2022, 3:26 PM IST

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಜೊತೆಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಲಕ್ಷ್ಮಣ ಸವದಿ ಸಂಪರ್ಕದಲ್ಲಿದ್ದಾರೆ ಎಂದು ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಗೋಕಾಕ್​​ನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ ಕೆ ಶಿವಕುಮಾರ್-ಲಕ್ಷ್ಮಣ ಸವದಿ ಮಾತನಾಡಿರುವ ಮಾಹಿತಿ ನನ್ನ ಬಳಿ ಇದೆ. ಅವರು ಎಷ್ಟು ಸಲ ಮಾತನಾಡಿದ್ದಾರೆ ಎಂಬುದನ್ನು ಸಿಎಂ ಬೊಮ್ಮಾಯಿ ಮಾಹಿತಿ ಪಡೆಯಬೇಕು. ಎಷ್ಟು ಬಾರಿ ಮಾತನಾಡಿದ್ದಾರೆ, ಎಲ್ಲೆಲ್ಲಿ ಭೇಟಿಯಾಗಿದ್ದಾರೆ ಎಲ್ಲ ವಿಚಾರಗಳು ನನಗೆ ಗೊತ್ತಿವೆ. ಮುಂದಿನ ದಿನಗಳಲ್ಲಿ ಬಿಜೆಪಿ ಯಾರ ಮೇಲೆ ಕ್ರಮ ತೆಗೆದುಕೊಳ್ಳುತ್ತೆ ಎಂಬುದನ್ನು ಕಾದು ನೋಡಬೇಕು. ಕಳೆದ ಚುನಾವಣೆಯಲ್ಲಿ ಸೋತಿರುವ ನಾಯಕನೇ ಡಿ ಕೆ ಶಿವಕುಮಾರ್ ಜತೆಗೆ ಸಂಪರ್ಕದಲ್ಲಿದ್ದಾರೆ. ಇವರೇ ಕಾಂಗ್ರೆಸ್​​ಗೆ ಹೋಗಲಿದ್ದಾರೆ ಎಂದು ಹೇಳಿದರು.

ಎಂಎಲ್​ಸಿ ಲಖನ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಬಿಜೆಪಿ ನಾಯಕರು ರಮೇಶ್ ಜಾರಕಿಹೊಳಿ‌, ಬಾಲಚಂದ್ರ ಜಾರಕಿಹೊಳಿ‌ ಅವರನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ರಮೇಶ್ ಜಾರಕಿಹೊಳಿ‌ಗೆ ಸಚಿವ ಸ್ಥಾನ ನೀಡಿದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಇನ್ನೂ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಅನುಕೂಲವಾಗಲಿದೆ ಎಂದು ಲಖನ್​ ಅಭಿಪ್ರಾಯಪಟ್ಟರು.

ರಮೇಶ್ ಜಾರಕಿಹೊಳಿ‌ ಜತೆಗೆ ಕಾಂಗ್ರೆಸ್ಸಿನ 16 ಶಾಸಕರು ಅಲ್ಲ, 25ಕ್ಕೂ ಅಧಿಕ ಜನ ಸಂಪರ್ಕದಲ್ಲಿದ್ದಾರೆ. ರಮೇಶ್ ಜಾರಕಿಹೊಳಿ‌ಗೆ ಸೂಕ್ತ ಸ್ಥಾನಮಾನ ನೀಡಿದರೆ ಅವರು ಮುಂದಿನ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸುತ್ತಾರೆ ಎಂದರು.

ನಮ್ಮನ್ನು ಮಣಿಸಲು ಯಾರಿಂದಲೂ ಸಾಧ್ಯವಿಲ್ಲ:ಸಚಿವ ಉಮೇಶ್ ಕತ್ತಿ ನಿವಾಸದಲ್ಲಿ ಜಿಲ್ಲಾ ಬಿಜೆಪಿ ನಾಯಕರ ಗೌಪ್ಯ ಸಭೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಲಖನ್​ ಅವರು, ನಮ್ಮ ಸಹೋದರರನ್ನ ಹೊರಗಿಟ್ಟು ಸಭೆ ಮಾಡಿರುವುದು ಸರಿಯಲ್ಲ. ನಮ್ಮನ್ನು ಹಣಿಯಲು ಯಾರಿಂದಲೂ ಸಾಧ್ಯವಿಲ್ಲ. ಅವರೇ ಅಥಣಿಯ ತಮ್ಮ ಸ್ವಂತ ಕ್ಷೇತ್ರದಲ್ಲಿ ಸೋತಿದ್ದಾರೆ. ಅವರು ಸಭೆ ಮಾಡಿದರೆ ಏನೂ ಪ್ರಯೋಜನ ಇದೆ. ಲಕ್ಷ್ಮಣ ಸವದಿ ಅವರು ಡಿಸಿಎಂ ಆಗಿದ್ರೂ ಸಂಘಟನೆ ಮಾಡಲಿಲ್ಲ. ಇವರಿಗೆ ರಮೇಶ್ ಜಾರಕಿಹೊಳಿ‌ಯ ಶಕ್ತಿ ಕುಂದಿಸಲು ಆಗಲ್ಲ. ಲೀಡರ್ಸ್ ಏನ್​ ಮಾಡಿದರೂ ಕಾರ್ಯಕರ್ತರ ಶಕ್ತಿ ನಮ್ಮ ಬಳಿ ಇದೆ ಎಂದು ಎಚ್ಚರಿಕೆ ರವಾನಿಸಿದರು.

ರಮೇಶ್ ಜಾರಕಿಹೊಳಿ‌ಗೆ ಸೋಲುವ ಕ್ಷೇತ್ರದಲ್ಲಿ ಪ್ರಚಾರ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಕೊಡುವ ದಿನಗಳು ಬರಲಿವೆ. ರಮೇಶ್ ಜಾರಕಿಹೊಳಿ‌ಗೆ ಸಚಿವ ಸ್ಥಾನ ನೀಡಿದರೆ ಎಂಟೇ ದಿನಗಳಲ್ಲಿ ಬೆಳಗಾವಿಯ ಎಲ್ಲ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುತ್ತಾರೆ. ನಾನು ಪಕ್ಷೇತರ ಸದಸ್ಯನಾಗಿದ್ದುಕೊಂಡೇ ಕೆಲಸ ಮಾಡುತ್ತೇನೆ. ನಾನು ಬ್ಲ್ಯಾಕ್ ಮೇಲ್ ತಂತ್ರ ಮಾಡುವುದಿಲ್ಲ. ಬಿಜೆಪಿ ಅಧಿಕಾರಕ್ಕೆ ಬರಲು ರಮೇಶ್ ಹಾಗೂ ಬಾಲಚಂದ್ರ ಜಾರಕಿಹೊಳಿ‌ ಶಕ್ತಿ ಬಳಸಿಕೊಳ್ಳಲು ಮನವಿ ಮಾಡುತ್ತೇನೆ. ಜಿಲ್ಲೆಯ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ಕಡೆ ಹೋಗುತ್ತೇನೆ ಹೊರತು, ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಆದರೆ ಸೋತ ನಾಯಕರೇ ರಮೇಶ್ ಜಾರಕಿಹೊಳಿ‌ಗೆ ಸಚಿವ ಸ್ಥಾನ ಕೊಡಬೇಡಿ ಅಂತಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲುವುದಿಲ್ಲ. ಅವರು ಸ್ವಂತ ಬಲದಿಂದ ಆಯ್ಕೆಯಾಗಿ ಬರಲ್ಲ, ಇನ್ನು ಪಕ್ಷವನ್ನು ಯಾವಾಗ ಅಧಿಕಾರಕ್ಕೆ ತರುತ್ತಾರೆ. ಎಂಎಲ್‌ಸಿ ಚುನಾವಣೆಯಲ್ಲೂ ಡಿಕೆಶಿ ಮತ್ತು ಸವದಿ ಕುತಂತ್ರದಿಂದ ಬಿಜೆಪಿ ಸೋತಿದೆ ಎಂದು ಲಖನ್​ ಆರೋಪಿಸಿದ್ದಾರೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ABOUT THE AUTHOR

...view details