ಅಥಣಿ(ಬೆಳಗಾವಿ):ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಅವರನ್ನು ಅಭ್ಯರ್ಥಿಯೆಂದು ವರಿಷ್ಠರು ಆಯ್ಕೆ ಮಾಡಲಾಗಿದೆ. ಹೀಗಾಗಿ ಪಕ್ಷದ ಬಿಜೆಪಿ ಮುಖಂಡರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸಿಂದಗಿ ಉಪಚುನಾವಣೆ ಉಸ್ತುವಾರಿ ಲಕ್ಷ್ಮಣ್ ಸವದಿ ಅಥಣಿಯಲ್ಲಿ ಹೇಳಿಕೆ ನೀಡಿದರು.
ಅಥಣಿ ಪಟ್ಟಣದಲ್ಲಿ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ತಾರು ಜನರನ್ನು ಪಕ್ಷದ ಅಭ್ಯರ್ಥಿಗಳು ಎಂದು ಆಯ್ಕೆ ಮಾಡುವುದಿಲ್ಲ, ಒಬ್ಬರನ್ನೇ ಪಕ್ಷ ಆಯ್ಕೆ ಮಾಡುವುದು. ಅಂದಮೇಲೆ ಸಣ್ಣಪುಟ್ಟ ವೈಮನಸ್ಸು ಇರುವುದು ಸಹಜ. ನಾನು ಎರಡು ದಿನ ಸಿಂದಗಿ ಕ್ಷೇತ್ರದಲ್ಲಿ ಇದ್ದುಕೊಂಡು ಎಲ್ಲಾ ನಮ್ಮ ಬಿಜೆಪಿ ಮುಖಂಡರನ್ನು ಒಗ್ಗೂಡಿಸಿ ಮತದಾರರ ಬಳಿ ಹೋಗುತ್ತೇವೆ. ನಮ್ಮ ಅಭ್ಯರ್ಥಿ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.