ಬೆಳಗಾವಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕೊರೊನಾ ವಿಪತ್ತು ಪರಿಹಾರ ನಿಧಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಕೊರೊನಾ ವಿಪತ್ತು ಪರಿಹಾರ ನಿಧಿಗೆ ಲಕ್ಷ್ಮಿ ಹೆಬ್ಬಾಳ್ಕರ್ ದೇಣಿಗೆ - Lakshmi Hebbalakar donates to Corona Disaster Relief Fund
ಕೊರೊನಾ ವಿಪತ್ತು ಪರಿಹಾರ ನಿಧಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಕೊರೊನಾ ವೈರಸ್ ಹರಡುತ್ತಿರುವ ಭೀತಿಯ ಸಂದರ್ಭದಲ್ಲಿ ಎಲ್ಲರೂ ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸುತ್ತಿದ್ದಾರೆ. ಜನರು ಮನೆಯಲ್ಲೇ ಇದ್ದುಕೊಂಡು ಸಹಕಾರ ನೀಡಬೇಕು. ನಮಗಾಗಿ ತಮ್ಮ ಜೀವವನ್ನೇ ಪಣವಾಗಿಟ್ಟು ಕೆಲಸ ಮಾಡುತ್ತಿರುವ ವೈದ್ಯಕೀಯ ಸಿಬ್ಬಂದಿ, ಪೌರಕಾರ್ಮಿಕರು, ಪೊಲೀಸರು, ಮಿಲ್ಟ್ರಿ ಸಿಬ್ಬಂದಿ ಸೇರಿದಂತೆ ಎಲ್ಲರಿಗೂ ನಾವು ಕೃತಜ್ಞರಾಗಿರೋಣ ಎಂದಿದ್ದಾರೆ.
ಸಂಕಷ್ಟದಿಂದ ಪಾರು ಮಾಡುವಂತೆ ಎಲ್ಲರ ಪರವಾಗಿ ನಾನು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.