ಕರ್ನಾಟಕ

karnataka

ETV Bharat / state

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ, ಆನಂದ ಮಾಮನಿಗೆ ಕೊರೊನಾ ದೃಢ - ರಾಜ್ಯದಲ್ಲೂ ಕೊರೊನಾ ಅಬ್ಬರ

ರಾಜ್ಯದಲ್ಲೂ ಕೊರೊನಾ ಅಬ್ಬರ ಜೋರಾಗಿದ್ದು ಮುಖ್ಯಮಂತ್ರಿ ಬಿಎಸ್​ವೈಗೆ ಸೋಂಕು ಕಾಣಿಸಿಕೊಂಡಿರುವ ಬೆನ್ನಲ್ಲೇ ಇದೀಗ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್​ ಅವರಲ್ಲೂ ಸೋಂಕು ದೃಢಪಟ್ಟಿದೆ.

Lakshmi hebbalkar
Lakshmi hebbalkar

By

Published : Apr 16, 2021, 6:20 PM IST

ಬೆಳಗಾವಿ: ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರಿಗೆ ಕೊರೆನಾ ಪಾಸಿಟಿವ್ ದೃಢಪಟ್ಟಿದೆ.

ಶುಕ್ರವಾರ ಬೆಳಗ್ಗೆ ಪರೀಕ್ಷೆ ಮಾಡಿಸಿಕೊಂಡಿದ್ದು, ಅವರ ವರದಿಯಲ್ಲಿ ಪಾಸಿಟಿವ್ ಬಂದಿರುವ ಕಾರಣ ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್ ಆಗಿದ್ದಾರೆ.ತಮ್ಮೊಡನೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮತ್ತು ಆದಷ್ಟು ಜಾಗರೂಕತೆಯಿಂದ ಇರುವಂತೆ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಚನ್ನರಾಜ ಹಟ್ಟಿಹೊಳಿ ವಿನಂತಿಸಿದ್ದಾರೆ.

ಆನಂದ ಮಾಮನಿ

ಇದನ್ನೂ ಓದಿ: ಸಿಎಂಗೆ ತಗುಲಿದ ಕೊರೊನಾ ಸೋಂಕು; ಮಣಿಪಾಲ್​ ಆಸ್ಪತ್ರೆಗೆ ದಾಖಲು

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸತೀಶ್ ಜಾರಕಿಹೊಳಿ‌ ಪರ ಕಳೆದ ಕೆಲ ದಿನಗಳಿಂದ ಪ್ರಚಾರದಲ್ಲಿ ತೊಡಗಿದ್ದರು. ಇನ್ನು ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಹೋಂ ಐಸೋಲೇಶನ್ ಆಗಿದ್ದಾರೆ. ಆನಂದ ಮಾಮನಿ ಮೊನ್ನೆ ಸಿಎಂ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿಯಾಗಿದ್ದರು. ಅಲ್ಲದೇ ಕೆಲ ಹೊತ್ತು ಅವರೊಂದಿಗೆ ಸಮಾಲೋಚನೆ ನಡೆಸಿದ್ದರು.

ABOUT THE AUTHOR

...view details