ಬೆಳಗಾವಿ :ರಕ್ಷಾ ಬಂಧನ ಹಬ್ಬದ ಪ್ರಯುಕ್ತ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಕ್ಷೇತ್ರದ ಸಹೋದರರಿಗೆ ರಾಖಿ ಕಟ್ಟುವ ಮೂಲಕ ವಿಶಿಷ್ಟವಾಗಿ ಹಬ್ಬವನ್ನು ಆಚರಣೆ ಮಾಡಿದರು.
ರಕ್ಷಾ ಬಂಧನ ಆಚರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿವರ್ಷವೂ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಗ್ರಾಮೀಣ ಕ್ಷೇತ್ರದ ಸಹೋದರರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ರಾಖಿ ಕಟ್ಟಿ ಅಣ್ಣ-ತಂಗಿಯರ ಹಬ್ಬವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರುತ್ತಿದ್ದಾರೆ.
ಅದೇ ರೀತಿ ಈ ವರ್ಷವೂ ಕೂಡ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ ಹಬ್ಬದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ರಾಖಿ ಕಟ್ಟಿ, ಹಣೆಗೆ ತಿಲಕ ಇಟ್ಟು, ಆರತಿ ಎತ್ತಿ ಪೂಜೆ ಸಲ್ಲಿಸುವ ಮೂಲಕ ರಕ್ಷಾ ಬಂಧನದ ಶುಭಾಶಯ ಕೋರಿದರು.
ಬಳಿಕ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಕೋವಿಡ್ ಹಿನ್ನೆಲೆ ಕಳೆದ ವರ್ಷ ರಕ್ಷಾ ಬಂಧನ ಆಚರಣೆ ಮಾಡಿರಲಿಲ್ಲ. ಆದರೆ, ಭಾರತೀಯ ಸಂಸ್ಕೃತಿಯನ್ನು ಮರೆಯಬಾರದು ಎಂಬ ಉದ್ದೇಶದಿಂದ ನಮ್ಮ ಮನೆಗೆ ಆಗಮಿಸಿದ ಸಹೋದರರಿಗೆ ರಾಖಿ ಕಟ್ಟಿ ಸಹೋದರಿಯರ ಬಾಂಧವ್ಯವನ್ನು ಎಂಜಾಯ್ ಮಾಡುತ್ತಿದ್ದೇನೆ ಎಂದು ಹರ್ಷವ್ಯಕ್ತಪಡಿಸಿದರು.