ಬೆಳಗಾವಿ :ನಮ್ಮಲ್ಲಿ ಯಾರೇ ಸಿಎಂ ಆದರೂ ಹೃದಯಪೂರ್ವಕವಾಗಿ ಸ್ವೀಕಾರ ಮಾಡುತ್ತೇವೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಶಿಸ್ತಿನ ಪಕ್ಷ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ. ನಮ್ಮಲ್ಲಿ ಯಾರೇ ಸಿಎಂ ಆದರೂ ಹೃದಯಪೂರ್ವಕವಾಗಿ ಸ್ವೀಕಾರ ಮಾಡುತ್ತೇವೆ ಎಂದಿದ್ದಾರೆ.
2023ರ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ರಾಜ್ಯಕ್ಕೆ ಒಳ್ಳೆಯದಾಗಬೇಕಂದ್ರೆ ಕಾಂಗ್ರೆಸ್ ಸರ್ಕಾರ ಬರಬೇಕು. ಕಾಂಗ್ರೆಸ್ನವರು ಮುಖ್ಯಮಂತ್ರಿ ಆಗಬೇಕೆಂಬುದು ನನ್ನದೂ ಕೂಡ ಬಯಕೆ ಇದೆ. ಮುಖ್ಯಮಂತ್ರಿ ಯಾರಾಗ್ತಾರೆ ಅಂತ ಹೈಕಮಾಂಡ್‌ನವರು ನಿರ್ಧಾರ ಮಾಡುತ್ತಾರೆ. ಹೈಕಮಾಂಡ್ ಏನು ಹೇಳುತ್ತೋ ಅದನ್ನು ನಾವು ಕೇಳುತ್ತೇವೆ ಎಂದಿದ್ದಾರೆ.