ಬೆಳಗಾವಿ :ಮುಂದಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆ ವೇಳೆ ಗ್ರಾಮೀಣ ಕ್ಷೇತ್ರವನ್ನು ಸೀರಿಯಸ್ ಆಗಿ ತೆಗೆದುಕೊಳ್ಳುತ್ತೇನೆ ಎಂದಿದ್ದ ಸಚಿವ ರಮೇಶ್ ಜಾರಕಿಹೊಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಮ್ಮೆ ಪರೋಕ್ಷವಾಗಿ ತಿರುಗೇಟು ಕೊಟ್ಟಿದ್ದಾರೆ.
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಭಾಷಾ ರಾಜಕಾರಣ ನಡೆಯುವುದಿಲ್ಲ. ಇಲ್ಲೇನಿದ್ದರೂ ಅಭಿವೃದ್ಧಿಯ ಅಜೆಂಡಾ. ಕ್ಷೇತ್ರದ ಜನರು ಅತ್ಯಂತ ಚಾಣಾಕ್ಷರಿದ್ದಾರೆ. ಕೆಲಸ ಮಾಡುವವರನ್ನು ಪ್ರೋತ್ಸಾಹಿಸುತ್ತಾರೆ ಎಂದು ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಕೃಷಿ ಉತ್ಪನ್ನ ಸಮಿತಿ ವ್ಯಾಪಾರಸ್ಥರು ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿ, ಕಾಂಗ್ರೆಸ್ನ ಹಿರಿಯ ಸದಸ್ಯ ಯುವರಾಜ ಕದಂ ಅವರು ಎಪಿಎಂಸಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.