ಬೆಳಗಾವಿ: ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದ ಬಳಿಯ ಮಲಪ್ರಭಾ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪತ್ತೆಯಾಗಿದ್ದು, ಅರಣ್ಯ ಇಲಾಖೆಯವರ ಸಹಾಯದಿಂದ ಮೊಸಳೆಯನ್ನು ಸಂರಕ್ಷಿಸಿ ಅರಣ್ಯ ಪ್ರದೇಶಕ್ಕೆ ರವಾನಿಸಲಾಗಿದೆ.
ಮಲಪ್ರಭಾ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ... ಸುರಕ್ಷಿತ ಪ್ರದೇಶಕ್ಕೆ ರವಾನೆ
ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದ ಬಳಿಯ ಮಲಪ್ರಭಾ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಇರುವುದು ಸ್ಥಳೀಯರಿಗೆ ಗಮನಕ್ಕೆ ಬಂದಿದೆ. ಆ ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ನಂತರ ಅದನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.
ಮಲಪ್ರಭಾ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆಮಲಪ್ರಭಾ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ
ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದ ಬಳಿ ಮಲಪ್ರಭಾ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಇರುವುದು ಸ್ಥಳೀಯರಿಗೆ ಗಮನಕ್ಕೆ ಬಂದಿದೆ. ಈ ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ವಲಯ ಅರಣ್ಯಾಧಿಕಾರಿ ಸುನೀತಾ ನಿಂಬರಗಿ ನೇತೃತ್ವದಲ್ಲಿ ಮೊಸಳೆ ಹಿಡಿಯುವ ಸಾಧನ, ಸಲಕರಣೆಯೊಂದಿಗೆ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳೀಯರ ಸಹಾಯದಿಂದ ಮೊಸಳೆಯನ್ನು ಹಿಡಿದು ಗಿಡವೊಂದಕ್ಕೆ ಕಟ್ಟಿ ಹಾಕಿದ್ದಾರೆ. ನಂತರ ಅರಣ್ಯ ಪ್ರದೇಶಕ್ಕೆ ಸಾಗಿಸಿ ಸುರಕ್ಷಿತ ಪ್ರದೇಶದಲ್ಲಿ ಮೊಸಳೆಯನ್ನು ಬಿಟ್ಟಿದ್ದಾರೆ ಎನ್ನಲಾಗಿದೆ.