ಕರ್ನಾಟಕ

karnataka

ETV Bharat / state

ಮಗಳ ಹುಟ್ಟುಹಬ್ಬ ಆಚರಣೆಗೆ ಸುವರ್ಣಸೌಧ ಬಾಡಿಗೆ ಕೊಡಿ: ಡಿಸಿ, ಸ್ಪೀಕರ್​ಗೆ ಪತ್ರ ಬರೆದ ತಂದೆ!

ಬೆಳಗಾವಿಯ ಸುವರ್ಣ ವಿಧಾನಸೌಧ ವರ್ಷದಲ್ಲಿ 15 ದಿನ ಕಲರವದಿಂದ ಕೂಡಿ ಉಳಿದ ದಿನ ಕಾಲಿ ಇರುತ್ತದೆ. ಇದರಿಂದ ಶುಭ ಕಾರ್ಯಗಳಿಗೆ ಬಾಡಿಗೆ ಕೊಟ್ಟರೆ ಒಳ್ಳೆಯದು. ಕಾಲಿ ಸಮಯದಲ್ಲಿ ನನ್ನ 5 ವರ್ಷದ ಮಗಳ ಹುಟ್ಟು ಹಬ್ಬಕ್ಕೆ ಸುವರ್ಣಸೌಧ ಬಾಡಿಗೆ ಕೊಡಿ ಎಂದು ವಕೀಲರೊಬ್ಬರು ಸಭಾಪತಿಗಳಿಗೆ ಮತ್ತು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

suvarna soudha
ಸ್ಪೀಕರ್​ಗೆ ಪತ್ರ ಬರೆದ ವಕೀಲ ಮಲ್ಲಿಕಾರ್ಜುನ ಚೌಕಾಶಿ

By

Published : Dec 22, 2022, 7:16 AM IST

ಪತ್ರ ಬರೆದ ಕುರಿತು ಮಾಹಿತಿ ನೀಡಿದ ವಕೀಲ ಮಲ್ಲಿಕಾರ್ಜುನ ಚೌಕಾಶಿ

ಬೆಳಗಾವಿ: ಮಗಳ ಹುಟ್ಟುಹಬ್ಬ ಆಚರಿಸಲು ಬೆಳಗಾವಿಯ ಸುವರ್ಣಸೌಧವನ್ನು ಬಾಡಿಗೆ ಕೊಡಿ ಎಂದು ಸಭಾಪತಿಗಳಿಗೆ ಮತ್ತು ಜಿಲ್ಲಾಧಿಕಾರಿಗೆ ತಂದೆಯೊಬ್ಬ ಪತ್ರ ಬರೆದ ಘಟನೆ ನಡೆದಿದೆ. ಗೋಕಾಕ್​ ತಾಲೂಕಿನ ಘಟಪ್ರಭಾ ನಿವಾಸಿ ಹಾಗೂ ವಕೀಲ ಮಲ್ಲಿಕಾರ್ಜುನ ಚೌಕಾಶಿ ಎಂಬುವರೇ ಪತ್ರ ಬರೆದವರಾಗಿದ್ದಾರೆ.

ಪತ್ರದಲ್ಲೇನಿದೆ?:ನನ್ನ ಏಕೈಕ ಪುತ್ರಿಯಾದ ಮಣಿಶ್ರೀಗೆ ಜನವರಿ 30ಕ್ಕೆ 5 ವರ್ಷ ಮುಗಿದು 6ನೇ ವರ್ಷ ತುಂಬಲಿದ್ದು, ಅವಳು 1ನೇ ತರಗತಿಯ ಪ್ರವೇಶ ಪಡೆಯಬೇಕಿದೆ. ಇದು ಅವಳ ಜೀವನದ ಅಮೂಲ್ಯ ಕ್ಷಣ. ಹೀಗಾಗಿ ಅವಳ ಹುಟ್ಟುಹಬ್ಬವನ್ನು ಆಚರಿಸುವುದರೊಂದಿಗೆ ನಮ್ಮ ಭಾಗದಲ್ಲಿ ಚಿಕ್ಕ ಹೆಣ್ಣುಮಕ್ಕಳಿಗೆ ಹುಟ್ಟದಟ್ಟಿ ಮಾಡುವ ಪದ್ಧತಿಯಿದ್ದು, ಇದು ಕೂಡ ಜೀವನದಲ್ಲಿ ಒಮ್ಮೆ ಬರುವಂತಹದ್ದು. ಆದ್ದರಿಂದ ವರ್ಷದಲ್ಲಿ 15 ದಿನ ಕಲರವದಿಂದ ಕೂಡಿ ಉಳಿದ ದಿನ ಭೂತ ಬಂಗ್ಲೆಯಂತಿರುವ ಕರ್ನಾಟಕ ಸುವರ್ಣ ವಿಧಾನಸೌಧ ಸಭಾಂಗಣವನ್ನು ಬಾಡಿಗೆ ನೀಡಬೇಕು ಎಂದು ವಿನಂತಿಸಿದ್ದಾರೆ.

ಸ್ಪೀಕರ್​ಗೆ ಪತ್ರ ಬರೆದ ವಕೀಲ ಮಲ್ಲಿಕಾರ್ಜುನ ಚೌಕಾಶಿ

ಪ್ರತಿ ವರ್ಷ ಚಳಿಗಾಲದ ಅಧಿವೇಶನಕ್ಕೆ ಮಾತ್ರ ಸುವರ್ಣ ವಿಧಾನಸೌಧದ ಬಳಕೆಯಾಗುತ್ತದೆ. ಹಲವು ವರ್ಷಗಳಿಂದ ಸರ್ಕಾರಿ ಕಚೇರಿಗಳನ್ನು ಸ್ಥಳಾಂತರ ಮಾಡುವಂತೆ ಮುಖ್ಯಮಂತ್ರಿ ಅವರನ್ನು ಕೇಳಿದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಹತ್ತು ದಿನ ಅಧಿವೇಶನಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತದೆ.

ಈ ಖರ್ಚು ಸರಿ ಹೊಂದಿಸಲು ಬಾಡಿಗೆ ಕೊಟ್ಟರೆ ಒಳ್ಳೆಯದು. ಈ ರೀತಿ ಕಾರ್ಯಕ್ರಮಗಳಿಗೆ ಬಾಡಿಗೆ ನೀಡುವುದರಿಂದ ಸರ್ಕಾರಕ್ಕೆ ಹೊರೆಯಾಗುತ್ತಿರುವ ಆರ್ಥಿಕ ನಿರ್ವಹಣಾ ವೆಚ್ಚವನ್ನು ಉಳಿಸಬಹುದು. ಸದ್ಯಕ್ಕೆ ಅಧಿವೇಶನ ನಡೆಯುತ್ತಿದ್ದು, ಸದನದಲ್ಲಿ ಈ ವಿಷಯವನ್ನು ಚರ್ಚಿಸಿ ಬಾಡಿಗೆ ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ರಾಮನಗರದದಲ್ಲಿ 'ಅಯೋಧ್ಯೆ' ಮಾದರಿ ರಾಮಮಂದಿರ ನಿರ್ಮಿಸಲು ಸಿಎಂಗೆ ಸಚಿವ ಅಶ್ವತ್ಥನಾರಾಯಣ ಪತ್ರ

ABOUT THE AUTHOR

...view details