ಕರ್ನಾಟಕ

karnataka

ETV Bharat / state

ಇಂಧನ ಬೆಲೆ ಇಳಿಕೆಗೆ ಆಗ್ರಹಿಸಿ ವಕೀಲರ ಸಂಘದಿಂದ ಪ್ರತಿಭಟನೆ - ತೈಲ ಬೆಲೆ ಏರಿಕೆಗೆ ವಿರೋಧ

ಪೆಟ್ರೋಲ್​​ ಮತ್ತು ಡೀಸೆಲ್​ ಬೆಲೆ ಏರಿಕೆ ಖಂಡಿಸಿ ಬೆಳಗಾವಿ ವಕೀಲರ ಸಂಘದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

Lawyers protest against state government
ಇಂಧನ ಬೆಲೆ ಇಳಿಕೆಗೆ ಆಗ್ರಹಿಸಿ ವಕೀಲರ ಸಂಘದಿಂದ ಪ್ರತಿಭಟನೆ

By

Published : Jun 24, 2020, 4:09 PM IST

ಬೆಳಗಾವಿ: ತೈಲ ಉತ್ಪನ್ನಗಳ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೆಳಗಾವಿ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪೆಟ್ರೋಲ್, ಡೀಸೆಲ್ ಬೆಲೆ ಸತತವಾಗಿ ಏರುತ್ತಿರುವ ಕಾರಣ ಮಧ್ಯಮ ಹಾಗೂ ಬಡವರ್ಗದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಲಾಕ್​​​ಡೌನ್​ನಿಂದ ಸಂಕಷ್ಟದಲ್ಲಿರುವ ಜನರಿಗೆ ತೈಲ ಬೆಲೆ ಹೆಚ್ಚಿಸುವ ಮೂಲಕ ಮತ್ತೆ ಕಷ್ಟಕ್ಕೆ ದೂಡಲಾಗುತ್ತಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ವಕೀಲರ ಸಂಘದಿಂದ ಪ್ರತಿಭಟನೆ

ಹಾಗೆಯೇ ದಿನಸಿ ವಸ್ತುಗಳ ಬೆಲೆ ಏರಿಕೆಯೂ ಆಗುತ್ತಿದೆ. ಜಾಗತಿಕ ‌ಮಟ್ಟದಲ್ಲಿ ಬೆಲೆ ಕುಸಿತಗೊಂಡಿದ್ದರೂ ದೇಶದಲ್ಲಿ ತೈಲ ಬೆಲೆ ಏರಿಸಲಾಗುತ್ತಿದೆ. ಕೂಡಲೇ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್​ ಬೆಲೆ ಇಳಿಕೆ ಮಾಡಬೇಕು. ಆರ್ಥಿಕ ಸಂಕಷ್ಟದಲ್ಲಿರುವ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಜಿಲ್ಲಾಧಿಕಾರಿಗೆ ಮನವಿ

ABOUT THE AUTHOR

...view details