ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ; ಮುಂದುವರಿದ ಶೋಧ ಕಾರ್ಯ - etv bharata kannada

ಬೆಳಗಾವಿಯಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ ಮಾಡಿದೆ. ಚಿರತೆಯ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

Leopard attack on man in Belagavi
ಬೆಳಗಾವಿಯಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ

By

Published : Aug 5, 2022, 4:59 PM IST

ಬೆಳಗಾವಿ: ಬೆಳಗಾವಿಯಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ ಮಾಡಿದ್ದು ಅದೃಷ್ಟವಶಾತ್ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾನೆ. ಚಿರತೆಯ ಚಲನವಲನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ಆರಂಭಿಸಿದ್ದಾರೆ.

ವ್ಯಕ್ತಿ ಮೇಲೆ ಚಿರತೆ ದಾಳಿ

ಗೋಕಾಕ ತಾಲೂಕಿನ ಖನಗಾವಿ ಗ್ರಾಮದ ಕಟ್ಟಡ ಕಾರ್ಮಿಕ ಸಿದರಾಯಿ ಲಕ್ಷ್ಮಣ್ ಮಿರಜಕರ್(38) ಗಾಯಗೊಂಡಿದ್ದಾರೆ. ಇವರು ಬೆಳಗಾವಿಯ ಜಾಧವ್ ನಗರದಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದಾಗ ಘಟನೆ ನಡೆದಿದೆ. ಜಾಧವ್ ನಗರದ ಯಶೋಧನ್ ಜಾಧವ್ ಎನ್ನುವವರ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಚಿರತೆ ಓಡಾಡಿದ ದೃಶ್ಯ ಸೆರೆಯಾಗಿದೆ. ಮನೆಯಿಂದ ಯಾರೂ ಹೊರ ಬರದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಜನರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಬಿಬಿಎಂಪಿ ವಾರ್ಡ್ ಮೀಸಲಾತಿಗೆ ಕಾಂಗ್ರೆಸ್​ ವಿರೋಧ, ಪ್ರತಿಭಟನೆ

ABOUT THE AUTHOR

...view details