ಚಿಕ್ಕೋಡಿ: ಸಮಗ್ರ ನೀರಾವರಿ ಯೋಜನೆ ಜಾರಿ, ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ರೈತರ ಬೇಡಿಕೆಗಳನ್ನು ಪ್ರಸಕ್ತ ಸಾಲಿನ ರಾಜ್ಯ ಬಜೆಟ್‍ನಲ್ಲಿ ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ರಾಯಭಾಗ ತಾಲೂಕು ಘಟಕದ ಪದಾಧಿಕಾರಿಗಳು ಹಾಗೂ ತಹಶೀಲ್ದಾರ ಚಂದ್ರಕಾಂತ ಭಜಂತ್ರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರಾಜ್ಯ ಬಜೆಟ್‍ನಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ರಾಜ್ಯ ರೈತ ಸಂಘ ಮನವಿ - ಸ್ಥಳೀಯ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ
ರೈತರ ಬೇಡಿಕೆಗಳನ್ನು ಪ್ರಸಕ್ತ ಸಾಲಿನ ರಾಜ್ಯ ಬಜೆಟ್‍ನಲ್ಲಿ ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಸ್ಥಳೀಯ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಮಲ್ಲಪ್ಪ ಅಂಗಡಿ ಮಾತನಾಡಿ, ದೇಶ 65 ಪ್ರತಿಶತ ಕೃಷಿ ಕ್ಷೇತ್ರ ಹೊಂದಿದ್ದರೂ, ಇಲ್ಲಿವರೆಗೂ ರಾಜ್ಯ ಸರ್ಕಾರಗಳು ಕೇವಲ 7-8 ಪ್ರತಿಶತ ಮಾತ್ರ ಕೃಷಿ ಕ್ಷೇತ್ರಕ್ಕೆ ಅನುದಾನ ನೀಡುತ್ತಾ ಬಂದಿವೆ. ಕೃಷಿ ಪ್ರಧಾನ ರಾಷ್ಟ್ರದಲ್ಲಿ ಕೃಷಿಕರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಕೃಷಿ ಕ್ಷೇತ್ರವನ್ನು ಅವಲಂಬಿಸಿರುವ ರೈತರನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ರಾಜ್ಯ ಬಜೆಟ್‍ನಲ್ಲಿ ಕೃಷಿ ಕ್ಷೇತ್ರಕ್ಕೆ ಶೇ.25 ರಷ್ಟು ಅನುದಾನ ನೀಡಬೇಕು. ಬೆಳೆ ವಿಮಾ ಪರಿಹಾರ ಹಣವನ್ನು ನೀಡುವ ಪ್ರಕ್ರಿಯೆಯನ್ನು ಸರಳಿಕೃತಗೊಳಿಸಬೇಕು. ಸಕ್ಕರೆ ಕಾರ್ಖಾನೆಗಳು ರೈತರು ಕಬ್ಬು ಪೂರೈಸಿದ ಕೂಡಲೇ ಕಬ್ಬಿನ ಬಿಲ್ ಶೀಘ್ರ ನೀಡುವಂತೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಬೇಕು. ರಾಜ್ಯದಲ್ಲಿ ಸಮಗ್ರ ನೀರಾವರಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.