ಕರ್ನಾಟಕ

karnataka

ETV Bharat / state

ಸ್ವಚ್ಛತೆಗೆ ಆದ್ಯತೆ ನೀಡೋಣ, ಕೊರೊನಾ ಹೊಡೆದೋಡಿಸೋಣ: ಶಶಿಕಲಾ ಜೊಲ್ಲೆ

ನಿಪ್ಪಾಣಿ ತಾಲೂಕಿನ ಯರನಾಳ ಗ್ರಾಮದಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಸಭೆ ಉದ್ದೇಶಿಸಿ ಮಾತನಾಡಿದ ಶಶಿಕಲಾ ಜೊಲ್ಲೆ, ಪಡಿತರ ವಿತರಣೆಯಲ್ಲಿ ಏನಾದರು ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತರುವಂತೆ ಸೂಚಿಸಿದರು.

By

Published : Apr 16, 2020, 8:10 PM IST

Let's emphasize cleanliness, let's fights to corona: Sasikala Jolle
ಸ್ವಚ್ಚತೆಗೆ ಆದ್ಯತೆ ನಿಡೋಣ, ಕೊರೊನಾ ಹೊಡೆದೋಡಿಸೋಣ: ಶಶಿಕಲಾ ಜೊಲ್ಲೆ

ಬೆಳಗಾವಿ/ಚಿಕ್ಕೋಡಿ: ಮಹಾಮಾರಿ ಕೊರೊನಾ ತಡೆಗಟ್ಟಲು ಮನೆಯಲ್ಲಿಯೇ ಇದ್ದು, ಗ್ರಾಮದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅಗತ್ಯ ಸಾಮಗ್ರಿಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಲಾಗುವುದು‌‌ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಿಪ್ಪಾಣಿ ತಾಲೂಕಿನ ಯರನಾಳ ಗ್ರಾಮದಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಸಭೆ ಉದ್ದೇಶಿಸಿ ಮಾತನಾಡಿದ ಅವರು, ಪಡಿತರ ವಿತರಣೆಯಲ್ಲಿ ಏನಾದರು ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತರುವಂತೆ ಸೂಚಿಸಿದರು.

ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಅಗತ್ಯ ಮಾರ್ಗದರ್ಶನ ನೀಡಿ, ಅವರ ಕಾರ್ಯಕ್ಕೆ ಅಭಿನಂದಿಸಿದರು. ಜೊತೆಗೆ ಕೊರೊನಾ ಸೋಂಕಿನ ಬಗ್ಗೆ ಮುಂಜಾಗ್ರತೆಯ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದರು. ಈ ಜಾಗೃತಿ ಕಾರ್ಯಕ್ರಮದಲ್ಲಿ ನಿಪ್ಪಾಣಿಯ ಯರನಾಳ ಗ್ರಾಮದ ಸ್ಥಳೀಯ ಜನಪ್ರತಿನಿಧಿಗಳು, ವೈದ್ಯರು, ಆರೋಗ್ಯ ಕೇಂದ್ರದ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಊರಿನ ಪ್ರಮುಖರು ಪಾಲ್ಗೊಂಡಿದ್ದರು.

ABOUT THE AUTHOR

...view details