ಕರ್ನಾಟಕ

karnataka

ETV Bharat / state

ಅಕ್ರಮ ತಡೆಗಟ್ಟಲು ಅಧಿಕಾರಿಗಳ ವರ್ಗಾವಣೆ ಕೋರಿ ಮಾಜಿ ಸಚಿವ ಮನವಿ - ಗೋಕಾಕ್​ ಕ್ಷೇತ್ರದ ಉಪಚುನಾವಣೆ

ಬೆಳಗಾವಿ ಜಿಲ್ಲೆ ಗೋಕಾಕ್​ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆ ಸಂದರ್ಭದಲ್ಲಿ ನಡೆಯುವ ಅಕ್ರಮ ತಡೆಗಟ್ಟಲು ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳೆ ರಾಜ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ.

ಮಾಜಿ ಸಚಿವ ಸತೀಶ್​ ಜಾರಕಿಹೊಳೆ

By

Published : Oct 11, 2019, 12:59 PM IST

ಬೆಳಗಾವಿ: ಗೋಕಾಕ್​​ ಕ್ಷೇತ್ರದ ಉಪಚುನಾವಣೆ ಸಂದರ್ಭದಲ್ಲಿ ಅಕ್ರಮ ತಡೆಗಟ್ಟಲು ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಮಾಜಿ ಸಚಿವ ಸತೀಶ ಜಾರಕಿಹೊಳಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್​​​ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಮಾಜಿ ಸಚಿವ ಸತೀಶ್​ ಜಾರಕಿಹೊಳೆ

ಗೋಕಾಕ್ ಕ್ಷೇತ್ರದ ಉಪಚುಣಾವಣೆ ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ನಡೆಯಬೇಕು. ಕ್ಷೇತ್ರದಲ್ಲಿ ಚುನಾವಣೆ ಅಕ್ರಮ ತಡೆಯಲು, ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಮನವಿ ತಿಳಿಸಲಾಗಿದೆ.

ಗೋಕಾಕ್​​ ತಾಲೂಕು ಪಂಚಾಯಿತಿ ಇಒ ಬಸವರಾಜ ಹೆಗ್ಗನಾಯಿಕ್, ಬಿಇಒ ಜಿ.ಬಿ. ಬಳಿಗಾರ, ತಾಲೂಕು ಪಂಚಾಯಿತಿ ಪ್ರಭಾರಿ ಸಹಾಯಕ ನಿರ್ದೇಶಕ ಎಸ್.ಎಚ್.ದೇಸಾಯಿ, ಪ್ರಭಾರಿ ಕಂದಾಯ ನಿರೀಕ್ಷಕ ಶಿವಾನಂದ ಹಿರೇಮಠ ಎಂಬುವವರನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಕೋರಿದ್ದಾರೆ. ಸತೀಶ ಜಾರಕಿಹೊಳಿಗೆ ಚುನಾವಣೆ ಅಧಿಕಾರಿ ಸಂಜೀವಕುಮಾರ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ.

ABOUT THE AUTHOR

...view details