ಚಿಕ್ಕೋಡಿ:ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೊಯ್ನಾ ಜಲಾಶಯ ಸುತ್ತಮುತ್ತ ಬೆಳಿಗ್ಗೆ 10:30 ಗಂಟೆಗೆ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪನದಲ್ಲಿ 3.1ರಷ್ಟು ತೀವ್ರತೆ ದಾಖಲಾಗಿದೆ ಎಂದು ವರದಿಯಾಗಿದೆ.
ಕೊಯ್ನಾ ಜಲಾಶಯದ ಸುತ್ತಮುತ್ತ ಲಘು ಭೂಕಂಪ: ಆತಂಕದಲ್ಲಿ ಕೃಷ್ಣಾ ನದಿ ತೀರದ ಜನತೆ - Maharashtra
ಕೊಯ್ನಾ ಜಲಾಶಯದ ಸುತ್ತಮುತ್ತ ಇಂದು ಬೆಳಿಗ್ಗೆ ಲಘು ಭೂಕಂಪ ಸಂಭವಿಸಿದೆ.

Koyna dam
ಭೂ ಕಂಪನದಿಂದ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೃಷ್ಣಾ ನದಿ ತೀರದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. 105 ಟಿಎಂಸಿ ಸಾಮರ್ಥ್ಯ ಹೊಂದಿರುವ ಕೊಯ್ನಾ ಜಲಾಶಯದಲ್ಲಿ ಈಗಾಗಲೇ 82 ಟಿಎಂಸಿ ನೀರು ಭರ್ತಿಯಾಗಿದೆ. ಲಘು ಭೂಕಂಪ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ಹೆಚ್ಚಿನ ನೀರು ಹೊರ ಬಿಡುವ ಸಾಧ್ಯತೆ ಇದ್ದು, ಇಂದು 10 ಸಾವಿರ ಕ್ಯೂಸೆಕ್ ನೀರು ಜಲಾಶಯದಿಂದ ಬಿಡುಗಡೆ ಮಾಡಲಾಗಿದೆ.