ಬೆಳಗಾವಿ: ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯ ಗೋವಾವೇಸ್ ಈಜುಕೊಳ ಹತ್ತಿರವಿರುವ ವೃತ್ತವನ್ನು ಹಿಂದಿನಿಂದಲೂ ಬಸವೇಶ್ವರ ವೃತ್ತ ಎಂದು ಕರೆಯಲಾಗುತ್ತಿದೆ. ಅಲ್ಲಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪಿಸಬೇಕೆಂಬ ಒತ್ತಾಯ ಕೇಳಿಬಂದಿದೆ.
ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆಗೆ ಲಿಂಗಾಯತ ಮಹಾಸಭೆ ಒತ್ತಾಯ
ಜಿಲ್ಲಾಧಿಕಾರಿ ಕಚೇರಿಗೆ ಲಿಂಗಾಯತ ಸಂಘಟನೆ ಮುಖಂಡರು ಭೇಟಿ ನೀಡಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪಿಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ಜಾಗತಿಕ ಲಿಂಗಾಯತ ಮಹಾಸಭೆ, ರಾಷ್ಟ್ರೀಯ ಬಸವದಳದ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ನಗರದ ಪ್ರಮುಖ ಕೇಂದ್ರವಾದ ಗೋವಾವೇಸ್ ಸರ್ಕಲ್ ಅನ್ನ ಮೊದಲಿನಿಂದಲೂ ಬಸವೇಶ್ವರ ವೃತ್ತ ಎಂದು ಕರೆಯಲಾಗುತ್ತಿತ್ತು. ಅದರ ಪಕ್ಕದಲ್ಲಿರುವ ಈಜುಕೊಳದ ಹತ್ತಿರ ಬಸವೇಶ್ವರ ಮೂರ್ತಿ ನಿರ್ಮಾಣ ಮಾಡಲಾಗಿತ್ತು. ಸದ್ಯ ಜಿಲ್ಲಾಡಳಿತ ಗೋವಾವೇಸ್ ಸರ್ಕಲ್ನಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮೂರ್ತಿ ಪ್ರತಿಷ್ಠಾಪನೆಗೆ ಮುಂದಾಗಿದ್ದು, ಲಿಂಗಾಯತ ಮಹಾಸಭೆ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.
ಜಿಲ್ಲಾಧಿಕಾರಿ ಕಚೇರಿಗೆ ಲಿಂಗಾಯತ ಸಂಘಟನೆ ಮುಖಂಡರು ಭೇಟಿ ನೀಡಿ ಈ ಜಾಗದಲ್ಲಿ ವಿಶ್ವಗುರು ಬಸವೇಶ್ವರ ಮೂರ್ತಿ ಪ್ರತಿಷ್ಠಾಪಿಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.