ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ವ್ಯಾಪಾರಸ್ಥರ ಸಮಸ್ಯೆ ಆಲಿಸಿದ ಸುರೇಶ್​ ಅಂಗಡಿ - Lock down relaxation in belgavi

ಬೆಳಗಾವಿ ನಗರದ ಪ್ರಮುಖ ಮಾರುಕಟ್ಟೆಗಳಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಭೇಟಿ ನೀಡಿ, ವ್ಯಾಪಾರಸ್ಥರ ಸಮಸ್ಯೆ ಆಲಿಸಿದರು.

Lock down relaxation in belgavi
ಸಚಿವ ಸುರೇಶ ಅಂಗಡಿ ಭೇಟಿ

By

Published : May 6, 2020, 5:04 PM IST

ಬೆಳಗಾವಿ:ಲಾಕ್​ಡೌನ್ ಸಡಿಲಿಕೆ ಆಗುತ್ತಿದ್ದಂತೆ ಸಾರ್ವಜನಿಕರ ಸಂಚಾರ ಹೆಚ್ಚಾಗಿದ್ದು, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ, ನಗರದಲ್ಲಿ ಸಂಚರಿಸಿ ವ್ಯಾಪಾರಸ್ಥರ ಕುಂದು-ಕೊರತೆಗಳನ್ನು ಆಲಿಸಿದರು.

ನಗರದ ರವಿವಾರ ಪೇಟೆ, ಗಣೇಶ್ ಪೇಟೆ, ಶನಿವಾರ ಕೂಟ್ ಸೇರಿದಂತೆ ಪ್ರಮುಖ ಮಾರುಕಟ್ಟೆ ವ್ಯಾಪಾರಿಗಳ ಸಮಸ್ಯೆಗಳಿಗೆ ಸ್ಪಂದಿಸಿದರು.

ಸಚಿವ ಸುರೇಶ್​ ಅಂಗಡಿ ಭೇಟಿ

ಈ ವೇಳೆ ಮಾತನಾಡಿದ ಅವರು, ಕೊರೊನಾ ನಿಯಂತ್ರಿಸಲು ಕಳೆದ 44 ದಿನಗಳಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಜನರು ಬೆಂಬಲಿಸಿದ್ದಾರೆ. ಆದರೆ ಈ ವೇಳೆ ಕೆಲಸವಿಲ್ಲದೆ ಪರದಾಡುತ್ತಿರೋ ಬಡವರು, ವ್ಯಾಪಾರಸ್ಥರ ಸಮಸ್ಯೆಗಳು ಹೆಚ್ಚಾಗಿವೆ ಎಂದರು.

ವ್ಯಾಪಾರಿಗಳು ಸರ್ಕಾರದ ಮಾರ್ಗಸೂಚಿಯಂತೆ ವಹಿವಾಟು ನಡೆಸಬೇಕು. ಚಿಲ್ಲರೆ ವ್ಯಾಪಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.

ABOUT THE AUTHOR

...view details