ಚಿಕ್ಕೋಡಿ:ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಸ್ಕೂಟಿಯಲ್ಲಿ ಬಚ್ಚಿಡಲಾಗಿದ್ದ 3.62 ಲಕ್ಷ ನಗದನ್ನು ಲೋಕಾಯುಕ್ತ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.
ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ:ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹೊರವಲಯದಲ್ಲಿರುವ ಕೊಗನೊಳ್ಳಿ ಚೆಕ್ ಪೋಸ್ಟ್ ಮೇಲೆ ಇಂದು ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಸದ್ಯ ಲೋಕಾಯುಕ್ತ ಅಧಿಕಾರಗಳು ದಾಖಲೆ ಪರಿಶೀಲನೆ ಮುಗಿಸಿದ್ದು, ಈ ವೇಳೆ ಸ್ಕೂಟಿಯಲ್ಲಿ ಬಚ್ಚಿಟ್ಟಿದ್ದ 500 ರೂ. ಮುಖಬೆಲೆಯ 3.62 ಲಕ್ಷ ನಗದನ್ನು ಜಪ್ತಿ ಮಾಡಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.