ಚಿಕ್ಕೋಡಿ(ಬೆಳಗಾವಿ): ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹೊರವಲಯದಲ್ಲಿರುವ ಕೋಗನೊಳ್ಳಿ ಆರ್‌ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗಿನಜಾವ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ದಾಳಿಯಲ್ಲಿ ಲಕ್ಷಗಟ್ಟಲೆ ಹಣ ಪತ್ತೆಯಾಗಿದೆ ಎನ್ನಲಾಗಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ಮುಂದುವರೆಸಿದ್ದಾರೆ.
ಹಣ ವಸೂಲಿ ಆರೋಪ:ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿದ್ದು, ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸಿಸುವ ಪ್ರಮುಖ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿ ಇದಾಗಿದೆ. ರಸ್ತೆ ಪಕ್ಕದಲ್ಲಿರುವ ಆರ್‌ಟಿಒ ಚೆಕ್ ಪೋಸ್ಟ್ ಮೂಲಕವೇ ಸಾವಿರಾರು ವಾಹನಗಳು ತಪಾಸಣೆಗೆ ಒಳಪಟ್ಟ ನಂತರವೇ ರಾಜ್ಯಕ್ಕೆ ಪ್ರವೇಶ ನೀಡಲಾಗುತ್ತದೆ.