ಬೆಳಗಾವಿ:ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಿತ್ತೂರು ತಾಲೂಕಿನ ತಿಮ್ಮಾಪುರ ಕ್ರಾಸ್ ಬಳಿ ಸಂಭವಿಸಿದೆ.
ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ ಕಾರಿನಲ್ಲಿದ್ದ ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತರಿಬ್ಬರೂ ಧಾರವಾಡ ಮೂಲದವರು ಎಂದು ತಿಳಿದುಬಂದಿದ್ದು, ಹೆಸರು ಇನ್ನಷ್ಟೇ ಗೊತ್ತಾಗಬೇಕಿದೆ.
ಕಾರುಬೆಳಗಾವಿಯಿಂದ ಧಾರವಾಡ ಕಡೆಗೆ ಹೊರಟಿತ್ತು. ಆಗ ತಿಮ್ಮಾಪುರ ಕ್ರಾಸ್ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿ ಇಬ್ಬರು ಮೃತದೇಹಗಳು ಸಿಲುಕಿಕೊಂಡಿದ್ದು, ಹೊರ ತೆಗೆಯಲಾಗಂತ ಸ್ಥಿತಿಯಲ್ಲಿವೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಿತ್ತೂರು ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.