ಬೆಳಗಾವಿ:ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮುಂದಾಗಿರುವ ರಾಜ್ಯ ಸರ್ಕಾರವು ಇದೀಗ ಲವ್ ಜಿಹಾದ್ ನಿಷೇಧ ಕಾಯ್ದೆಯನ್ನು ತರಲು ಮುಂದಾದಂತಿದೆ. ಈ ಬಗ್ಗೆ ಸಚಿವ ಸುನಿಲ್ ಕುಮಾರ್ ಸುಳಿವು ನೀಡಿದ್ದಾರೆ.
ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆಯನ್ನೂ ತರುತ್ತೇವೆ. ಬಿಜೆಪಿ ಮೊದಲಿನಿಂದಲೂ ಗೋಹತ್ಯೆ ನಿಷೇಧ ಕಾಯ್ದೆ ತರುವುದಾಗಿ ಹೇಳಿತ್ತು. ಈಗ ಮತಾಂತರ ನಿಷೇಧ ಕಾಯ್ದೆಯನ್ನು ತರುತ್ತೇವೆ ಎಂದರು.
ಮತಾಂತರವನ್ನು ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದ ಕೂಡ ವಿರೋಧಿಸಿದ್ದರು. ಈಗ ಈ ಕಾಯ್ದೆಗೆ ಕಾನೂನಿನ ಸ್ವರೂಪ ತರುತ್ತಿದ್ದೇವೆ. ಈ ವಿಚಾರದಲ್ಲಿ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಯಾಕೆ ವಿರೋಧ ಮಾಡುತ್ತಿದೆ ಎಂಬುದನ್ನು ಹೇಳಲಿ. ಯಾವ ಯಾವ ಕಾರಣಕ್ಕೆ ಮತಾಂತರ ಆಗುತ್ತಿದೆ?. ಅದರ ದುಷ್ಪರಿಣಾಮ ಏನು ಎಂಬುದು ಗೊತ್ತಿದೆ. ಕೇವಲ ಒಂದು ಸಮುದಾಯವನ್ನ ಗುರಿಯಾಗಿಟ್ಟುಕೊಂಡು ಕಾಯ್ದೆ ತರುತ್ತಿಲ್ಲ. ಈ ಬಗ್ಗೆ ಚರ್ಚೆಗೆ ಬಂದರೆ, ನಾವು ಸಿದ್ಧವಿದ್ದೇವೆ ಎಂದು ಹೇಳಿದರು.
ಸಚಿವ ಸುನಿಲ್ ಕುಮಾರ್ ಹೇಳಿಕೆ ಕೇವಲ ಒಂದು ಸಮುದಾಯವನ್ನ ಗುರಿಯಾಗಿಸಿ ಕಾಯ್ದೆ ಜಾರಿ ಮಾಡುತ್ತಿಲ್ಲ. ಮತಾಂತರ ನಿಷೇಧ ಕಾಯ್ದೆ ತರೋದ್ರಲ್ಲಿ ಗೊಂದಲ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆ ತಂದಿದ್ದೇವೆ. ಮತಾಂತರ ನಿಷೇಧ ಕಾಯ್ದೆಯನ್ನೂ ಜಾರಿ ಮಾಡ್ತೇವೆ. ಮುಂದೆ ಲವ್ ಜಿಹಾದ್ ವಿರುದ್ಧವೂ ಕಾನೂನು ತರ್ತೀವಿ. ನಾವೆಲ್ಲಾ ಆ ಹಿನ್ನೆಲೆಯಲ್ಲೇ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಮತಾಂತರದಿಂದ ಆಗುತ್ತಿರುವ ದುಷ್ಪರಿಣಾಮಗಳು ಗೊತ್ತಿದೆ. ಕಾಂಗ್ರೆಸ್ನವರು ಚರ್ಚೆಗೆ ಬರಲಿ, ಸಲಹೆ ಕೊಡಲಿ. ಮತಾಂತರ ಎಂದರೆ ರಾಷ್ಟ್ರಾಂತರ ಅಂತ ವಿವೇಕಾನಂದರು ಹೇಳಿದ್ದರು. ಆಮಿಷ ಒಡ್ಡಿ, ಪಿತೂರಿ ಮಾಡಿ ಮತಾಂತರ ಮಾಡ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ:ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ 'ಸಿದ್ದ'ಸೂತ್ರಧಾರ?: ಹೆಚ್ಡಿಕೆ