ಚಿಕ್ಕೋಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ನಡೆದಿದೆ.
ಪಿಯು ಪರೀಕ್ಷೆಯಲ್ಲಿ ಕಡಿಮೆ ಅಂಕ... ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ - ಆತ್ಮಹತ್ಯೆ
ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವ ಕಾರಣ ಮನನೊಂದು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಐಶ್ವರ್ಯ
ಐಶ್ವರ್ಯ ಉಮೇಶ ಬೆಳಕೂಡ (19) ಮೃತ ದುರ್ದೈವಿ. ಪಿಯುಸಿ ಫಲಿತಾಂಶದಲ್ಲಿ ಕಡಿಮೆ ಅಂಕ ಬಂದ ಹಿನ್ನೆಲೆ ತನ್ನ ಮನೆಯ ರೂಮಿನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾಳೆ. ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಮನೆಯವರ ರೋದನ ಮುಗಿಲು ಮುಟ್ಟಿದೆ.
ಘಟನೆ ಕುರಿತು ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.