ಕರ್ನಾಟಕ

karnataka

ETV Bharat / state

ಮಚ್ಛೆ-ಹಲಗಾ ಬೈಪಾಸ್ ರಸ್ತೆಗೆ ವಿರೋಧ: ಕೈಯಲ್ಲಿ ಕುಣಿಕೆ, ವಿಷ ಹಿಡಿದು ರೈತರ ಧರಣಿ - Belgavi latest News 2021

ಮಚ್ಛೆ- ಹಲಗಾ ಬೈಪಾಸ್ ರಸ್ತೆ ನಿರ್ಮಾಣ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ರೈತರು ಕೈಯಲ್ಲಿ ವಿಷದ ಬಾಟಲಿ ಹಾಗೂ ಕೊರಳಿಗೆ ಹಗ್ಗ ಹಾಕಿಕೊಂಡು ಆಕ್ರೋಶ ವ್ಯಕ್ತಪಡಿಸಿದರು.

belagavi
ಕೈಯಲ್ಲಿ ಕುಣಿಕೆ, ವಿಷ ಹಿಡಿದು ರೈತರ ಧರಣಿ

By

Published : Feb 10, 2021, 3:01 PM IST

ಬೆಳಗಾವಿ: ಹಲಗಾ-ಮಚ್ಛೆ ಬೈಪಾಸ್ ರಸ್ತೆ ನಿರ್ಮಾಣ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ರೈತರ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ರೈತರು ಕೈಯಲ್ಲಿ ವಿಷದ ಬಾಟಲಿ ಹಾಗೂ ಕೊರಳಿಗ ಹಗ್ಗ ಹಾಕಿಕೊಂಡು ಆಕ್ರೋಶ ವ್ಯಕ್ತಪಡಿಸಿದರು.

ಹಲಗಾ-ಮಚ್ಛೆ ಬೈಪಾಸ್ ರಸ್ತೆಯನ್ನು ಯಾವುದೇ ಕಾರಣಕ್ಕೂ ಆರಂಭಿಸಬಾರದು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲ್ಲಿ ಕೆಲಸ ನಡೆಸಲು ಬರಬಾರದು. ತಕ್ಷಣವೇ ಈ ಕಾಮಗಾರಿ ನಿಲ್ಲಿಸಬೇಕು. ಇಲ್ಲದೇ ಹೋದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತರು ಬೆದರಿಕೆ ಹಾಕಿದ್ದಾರೆ.

ಇದನ್ನು ಓದಿ: ಮಚ್ಛೆ - ಹಲಗಾ ಬೈಪಾಸ್ ರಸ್ತೆಗೆ ವಿರೋಧ: ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ರೈತರು

ನಿನ್ನೆ ಕೆಲಸ ಆರಂಭಿಸಲು ಬಂದಾಗ ರೈತರು ಜೆಸಿಬಿ ಮುಂದೆ ಮಲಗಿ ಪ್ರತಿಭಟನೆ ನಡೆಸಿ ಪ್ರಾಧಿಕಾರದವರನ್ನು ವಾಪಸ್ ಕಳುಹಿಸಿದ್ದರು. ಈಗ ಮತ್ತೆ ವಿಷದ ಬಾಟಲಿ ಹಿಡಿದು ಕುಳಿತಿದ್ದಾರೆ.‌ ಬೈಪಾಸ್ ರಸ್ತೆ ನಿರ್ಮಾಣಕ್ಕೆ ರೈತರ ಫಲವತ್ತಾದ ಭೂಮಿ ಪಡೆಯಲಾಗಿದೆ. ಇದಕ್ಕೆ ರೈತರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ರೈತರ ಪ್ರತಿಭಟನೆಗೆ ರೈತ ಸಂಘಟನೆಗಳು ಸಾಥ್ ನೀಡಿವೆ.

ABOUT THE AUTHOR

...view details