ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿಯ ಯುವ ಸಾಹಿತಿ, ಸಾಂಸ್ಕೃತಿಕ ರಾಯಭಾರಿ, ಸಮಾಜಸೇವಕ ಮಹಾದೇವ ಬಿರಾದಾರ ಅವರಿಗೆ 2020ನೇ ಸಾಲಿನ ಡಾ. ಪಂಡಿತ ಪುಟ್ಟರಾಜ ಗವಾಯಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಹಾದೇವ ಬಿರಾದಾರಗೆ ಡಾ. ಪಂಡಿತ ಪುಟ್ಟರಾಜ ಗವಾಯಿ ಪ್ರಶಸ್ತಿ ಪ್ರದಾನ - athani news Mahadeva Biradara
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿಯ ಯುವ ಸಾಹಿತಿ, ಸಾಂಸ್ಕೃತಿಕ ರಾಯಭಾರಿ, ಸಮಾಜಸೇವಕ ಮಹಾದೇವ ಬಿರಾದಾರ ಅವರಿಗೆ 2020ನೇ ಸಾಲಿನ ಡಾ. ಪಂಡಿತ ಪುಟ್ಟರಾಜ ಗವಾಯಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಗದಗ ಅಡವೇಂದ್ರಸ್ವಾಮಿ ಮಠದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಾಡೋಜ ಡಾ. ಮಹೇಶ ಜೋಶಿ ಕಾರ್ಯಕ್ರಮ ಉದ್ಘಾಟಿಸಿದರು. ಭೈರನಟ್ಟಿ ದೊರೆಸ್ವಾಮಿ, ವಿರಕ್ತಮಠದ ಶ್ರೀ ಮ.ನಿ.ಪ್ರ ಶಾಂತಲಿಂಗ ಸ್ವಾಮಿಗಳು, ಜಗದ್ಗುರು ಅನ್ನದಾನೇಶ್ವರ ಶಾಖಾಮಠದ ಶ್ರೀ ವಿರೇಶ್ವರ ಶಿವಯೋಗಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಅಡವೇಂದ್ರ ಸ್ವಾಮಿ ಮಠದ ಧರ್ಮದರ್ಶಿ ವೇ. ಮಹೇಶ್ವರ ಸ್ವಾಮಿ ಹೊಸಳ್ಳಿಮಠ ನೇತೃತ್ವ ವಹಿಸಿದ್ದು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜಗುರು ಗುರುಸ್ವಾಮಿ ಕಲಕೇರಿ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಚಮಕೇರಿಯ ಅಪ್ಪ ಪುಸ್ತಕಾಲಯಕ್ಕೆ ಪ್ರತಿಷ್ಠಾನದ ವತಿಯಿಂದ ಸಾವಿರದ ಒಂದು ಪುಸ್ತಕಗಳನ್ನು ದೇಣಿಗೆಯಾಗಿ ನೀಡಲಾಯಿತು. ಇನ್ನು ಮಹೇಶ ಮತ್ತು ಸಂಗಡಿಗರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.