ಕರ್ನಾಟಕ

karnataka

ETV Bharat / state

ಗಡಿ ವಿವಾದ ಮಾತುಕತೆ ಮೂಲಕ ಬಗೆಹರಿಯಲಿ: ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ - ಕೇಂದ್ರ ಸರ್ಕಾರ ಸಹ ಸಕಾರಾತ್ಮಕ ನಿಲುವು

ಗಡಿ ವಿವಾದದ ಕುರಿತು ಕೇಂದ್ರ ಸರ್ಕಾರ ಸಹ ಸಕಾರಾತ್ಮಕ ನಿಲುವು ವ್ಯಕ್ತಪಡಿಸಬೇಕಿದೆ. ಈ ವಿವಾದ ಸರ್ವಸಮ್ಮತಿಯ ಮೂಲಕ ಬಗೆಹರಿಯಬೇಕೆಂಬುದು ನಮ್ಮ ನಿಲುವು ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿದ್ದಾರೆ.

Maharashtra CM Eknath Shinde
ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ

By

Published : Nov 24, 2022, 11:54 AM IST

Updated : Nov 24, 2022, 12:52 PM IST

ಬೆಳಗಾವಿ: ಗಡಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ತಾನೇ ದಾವೆ ಹೂಡಿರುವ ಮಹಾರಾಷ್ಟ್ರ ಸರ್ಕಾರ ಇದೀಗ ಹೊಸ ವರಸೆ ಶುರು ಮಾಡಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಏಕನಾಥ ಶಿಂಧೆ, ಗಡಿ ವಿವಾದ ಮಾತುಕತೆ ಮೂಲಕ ಬಗೆಹರಿಯಬೇಕೆಂಬುದು ನಮ್ಮ ನಿಲುವು ಎಂದಿದ್ದಾರೆ.

ನಾವು ಈಗಾಗಲೇ ಸಭೆ ನಡೆಸಿದ್ದೇವೆ. ಈ ಹಳೆಯ ವಾದವೇನಿದೆ ಅದು ನ್ಯಾಯಾಲಯದ ಮುಂದಿದೆ. ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಯುತ್ತಿದೆ. ಎರಡೂ ರಾಜ್ಯಗಳ ರಾಜ್ಯಪಾಲರ ಸಭೆಯಾಗಿದೆ. ಕೇಂದ್ರ ಸರ್ಕಾರ ಸಹ ಸಕಾರಾತ್ಮಕ ನಿಲುವು ವ್ಯಕ್ತಪಡಿಸಬೇಕಿದೆ. ವಿವಾದ ಸರ್ವ ಸಮ್ಮತಿಯ ಮೂಲಕ ಬಗೆಹರಿಯಬೇಕೆಂಬುದು ನಮ್ಮ ನಿಲುವಾಗಿದೆ. ಈ ನಿಟ್ಟಿನಲ್ಲಿ ನಾವು ಸಭೆಯನ್ನು ಸಹ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ

ಮಹಾರಾಷ್ಟ್ರ ಸರ್ಕಾರದ ಯೋಜನೆಯ ಲಾಭ ಗಡಿಭಾಗದ ಮರಾಠಿಗರಿಗೆ ಸಿಗುತ್ತಿತ್ತೋ ಅದನ್ನು ಹೆಚ್ಚಿಸಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯನ್ನು ಹತ್ತು ಸಾವಿರ ರೂಪಾಯಿಯಿಂದ 20 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಮುಖ್ಯಮಂತ್ರಿ ಧರ್ಮಾದಾಯ ಸಹಾಯ ನಿಧಿ ಯೋಜನೆಯ ಲಾಭ ಬಂದ್ ಆಗಿತ್ತು. ಅದನ್ನೂ ಮತ್ತೆ ಶುರು ಮಾಡಿದ್ದೇವೆ.

ಗಡಿಭಾಗದ ಮರಾಠಿಗರಿಗೆ ಆರೋಗ್ಯ ಸೌಲಭ್ಯ ನೀಡಲು ಮಹಾತ್ಮ ಜ್ಯೋತಿಬಾ ಪುಲೆ ಯೋಜನೆ ನೀಡಲು ನಿರ್ಣಯ ತೆಗೆದುಕೊಳ್ಳಲಾಗಿದೆ. ಗಡಿ ಭಾಗದ ಮರಾಠಿಗರಿಗೆ ಮಹಾರಾಷ್ಟ್ರ ಸರ್ಕಾರದಿಂದ ಸಿಗುವ ಯೋಜನೆಗಳ ಲಾಭ ಹೆಚ್ಚಿಸಿದ್ದೇವೆ. ಮತ್ಯಾರೋ ವಾದ ಸೃಷ್ಟಿಸಿ ಮತ್ತಷ್ಟು ಜಟಿಲಗೊಳಿಸಬಾರದು. ನಾವು ಸಭೆ ನಡೆಸಿದಾಗ ಸಾಕಷ್ಟು ಸಲಹೆಗಳು ಬಂದಿವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ:ಗಡಿ ಉಸ್ತುವಾರಿಗೆ ಮತ್ತೆ ಇಬ್ಬರು ಸಚಿವರನ್ನು ನೇಮಿಸಿದ ಮಹಾ ಸರ್ಕಾರ

Last Updated : Nov 24, 2022, 12:52 PM IST

ABOUT THE AUTHOR

...view details