ಬೆಳಗಾವಿ: ಗಡಿ ವಿವಾದಕ್ಕೆ ಸಂಬಂಧಿಸಿದ ವಿವಾದಿತ ಪುಸ್ತಕ ಇಂದು ಬಿಡುಗಡೆಯಾಗಲಿದ್ದು, ಮಹಾರಾಷ್ಟ್ರ ಸರ್ಕಾರ ಮತ್ತೆ ಗಡಿಯ ಕಿಡಿ ಹೊತ್ತಿಸಲು ಮುಂದಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗಡಿ ವಿವಾದ ಕುರಿತಾದ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. 'ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ; ಸಂಘರ್ಷ ಅನಿ ಸಂಕಲ್ಪ' ಎಂಬೆಸರಿನ ಪುಸ್ತಕವನ್ನು ಮಧ್ಯಾಹ್ನ 12 ಗಂಟೆಗೆ ಮುಂಬೈನಲ್ಲಿ ಸಿಎಂ ಉದ್ಧವ್ ಠಾಕ್ರೆ ಬಿಡುಗಡೆ ಮಾಡಲಿದ್ದಾರೆ. ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಸೇರಿ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.