ಬೆಳಗಾವಿ:ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಆಗುತ್ತಿದ್ದಂತೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮತ್ತೆ ಗಡಿ ವಿವಾದ ಕೆದಕಿದ್ದಾರೆ. ಗಡಿ ವಿವಾದದ ಕುರಿತು ಎಂಇಎಸ್ ಮುಖಂಡರಿಂದ ಪ್ರಧಾನಿಗೆ ಪತ್ರ ಅಭಿಯಾನ ಬೆನ್ನಲ್ಲೇ ಅಜಿತ್ ಪವಾರ್ ಕ್ಯಾತೆ ತೆಗೆದಿರುವುದು ಗಡಿ ಭಾಗದ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಮತ್ತೆ ಗಡಿ ಕ್ಯಾತೆ ತೆಗೆದ ಮಹಾರಾಷ್ಟ್ರ ಡಿಸಿಎಂ: ಪ್ರಧಾನಿಗೆ ಬರೆದ ಪತ್ರದಲ್ಲಿ ಏನಿದೆ? - Karnataka Maharashtra dispute
ಕರ್ನಾಟಕ-ಮಹಾರಾಷ್ಟ್ರದ ಗಡಿ ವಿವಾದ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳಿ ಎಂದು ಮಹಾರಾಷ್ಟ್ರದ ಎನ್ಸಿಪಿ ನಾಯಕ ಅಜಿತ್ ಪವಾರ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಗಡಿ ವಿವಾದ ಇತ್ಯರ್ಥಕ್ಕೆ ಮಧ್ಯಪ್ರವೇಶಿಸಿ ಎಂದು ಆಗಸ್ಟ್ 9ರಂದು ಪ್ರಧಾನಿ ಮೋದಿಗೆ ಡಿಸಿಎಂ ಅಜಿತ್ ಪವಾರ್ ಪತ್ರ ಬರೆದಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರದ ಗಡಿ ವಿವಾದ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳಿ ಎಂದು ಅಜಿತ್ ಪವಾರ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಗಡಿ ವಿವಾದ ಇತ್ಯರ್ಥಕ್ಕೆ ಮಧ್ಯಪ್ರವೇಶಿಸಿ ಎಂದು ಆಗಸ್ಟ್ 9ರಂದು ಪ್ರಧಾನಿ ಮೋದಿಗೆ ಡಿಸಿಎಂ ಅಜಿತ್ ಪವಾರ್ ಪತ್ರ ಬರೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರ ರಾಜ್ಯ ರಚನೆಯಾಗಿ 65ಕ್ಕೂ ಹೆಚ್ಚು ವರ್ಷ ಕಳೆದಿವೆ. ಕರ್ನಾಟಕದ ಮರಾಠಿ ಭಾಷಿಕ ಪ್ರದೇಶಗಳು ಮಹಾರಾಷ್ಟ್ರ ಸೇರಿಲ್ಲ. ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಮಹಾರಾಷ್ಟ್ರ ಸೇರಬೇಕು. ಸಂಯುಕ್ತ ಮಹಾರಾಷ್ಟ್ರ ರಚನೆಯ ಕನಸು ಇನ್ನೂ ಈಡೇರಿಲ್ಲ. ಸಂಯುಕ್ತ ಮಹಾರಾಷ್ಟ್ರ ರಚನೆ ಆಗುವ ತನಕ ಮಹಾರಾಷ್ಟ್ರ ವಿರಮಿಸಲ್ಲ. ಕರ್ನಾಟಕದಲ್ಲಿ ಇರುವ ಮರಾಠಿ ಭಾಷಿಕರಿಗೆ ನ್ಯಾಯ ಒದಗಿಸಿ. ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ತಾವು ಸಹ ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಿ ಎಂದು ಪ್ರದಾನಿಗೆ ಬರೆದ ಪತ್ರದಲ್ಲಿ ಅಜಿತ್ ಪವಾರ್ ಮನವಿ ಮಾಡಿದ್ದಾರೆ.