ಅಥಣಿ :ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದದ ಕಳೆದ ಎರಡು ದಿನಗಳಿಂದ ಮತ್ತೆ ಮುನ್ನೆಲೆಗೆ ಬಂದಿದೆ. ಇದರ ಜೊತೆಗೆ ಮಹಾರಾಷ್ಟ್ರದ ಕೆಲ ಕಿಡಿಗೇಡಿಗಳು ಕರ್ನಾಟಕ ಸಾರಿಗೆ ಬಸ್ಗಳಿಗೆ ಕಪ್ಪು ಮಸಿ ಬಳಿದು ಕಲ್ಲು ತೂರಾಟ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಮಹಾರಾಷ್ಟ್ರದ ಜತ್ತ್ ತಾಲೂಕಿನ ತಿಕ್ಕುಂಡಿ ಗ್ರಾಮದ ಕನ್ನಡಿಗರು ಕನ್ನಡ ಧ್ವಜ ಹಾಗೂ ಕರುನಾಡಿಗೆ ಜೈ ಎಂದು ನಾಮಫಲಕ ಹಾಕಿ, ಸಿಎಂ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಜತ್ತ ತಾಲೂಕಿಗೆ ಕರ್ನಾಟಕ ಸಿಎಂ ಆದಷ್ಟು ಬೇಗನೆ ಭೇಟಿ ನೀಡಲಿ : ಮಹಾ ಕನ್ನಡಿಗರಿಂದ ಸ್ವಾಗತ ಇಲ್ಲಿನ ಜತ್ತ್ ತಾಲೂಕಿನ ತಿಕ್ಕುಂಡಿ ಗ್ರಾಮದಲ್ಲಿ ಕನ್ನಡ ಧ್ವಜಗಳನ್ನು ಹಿಡಿದು ಕರುನಾಡಿಗೆ ಜೈಕಾರ ಹಾಕಿದ ಕನ್ನಡಿಗರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಕಳೆದ 75 ವರ್ಷಗಳಿಂದ ಮಹಾರಾಷ್ಟ್ರ ಸರ್ಕಾರ ಈ ಭಾಗದಲ್ಲಿ ನೀರಾವರಿ ಯೋಜನೆಯನ್ನು ರೂಪಿಸಿಲ್ಲ.
ಆದರೆ, ಕರ್ನಾಟಕ ಸಿಎಂ ಬೊಮ್ಮಾಯಿ ಜತ್ ತಾಲೂಕಿನ 42 ಹಳ್ಳಿಗೆ ನೀರು ಕೊಡುತ್ತೇವೆ ಎಂದು ಹೇಳಿದ್ದು, ನಮಗೆ ಸಂತೋಷವಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡುತ್ತಿದ್ದಂತೆ ಮಹಾರಾಷ್ಟ್ರದಲ್ಲಿ ಸಭೆ ಮೇಲೆ ಸಭೆ ನಡೆಸಿ ಜತ್ ಕಡೆ ತಿರುಗಿ ನೋಡುವಂತಾಗಿದೆ. ಇದಕ್ಕೆ ಕಾರಣವಾದ ಬಸವರಾಜ ಬೊಮ್ಮಾಯಿ ಅವರಿಗೆ ನಾವು ಧನ್ಯವಾದ ಸಲ್ಲಿಸುತ್ತೇವೆ ಎಂದು ಮಹಾರಾಷ್ಟ್ರ ಕನ್ನಡಿಗರು ಹೇಳಿದ್ದಾರೆ.
ಇಲ್ಲಿ ಕಳೆದ 40 ವರ್ಷಗಳಿಂದ ಕುಡಿಯುವ ನೀರಿಗಾಗಿ ಹಾಗೂ ಮೂಲ ಸೌಕರ್ಯ ನೀಡುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ಕರ್ನಾಟಕಕ್ಕೆ ಸೇರಲು ನಾವು ತುದಿಗಾಲ ಮೇಲೆ ನಿಂತಿದ್ದೇವೆ. ಜತ್ತ ತಾಲೂಕಿನ 42 ಗ್ರಾಮಗಳ ಗ್ರಾಮಸ್ಥರ ಸಭೆ ಮಾಡಲು ನಾವು ತಯಾರಿದ್ದೇವೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆದಷ್ಟು ಬೇಗನೆ ತಾಲೂಕಿಗೆ ಭೇಟಿ ನೀಡುವಂತೆ ಮಹಾ ಕನ್ನಡಿಗಳು ಆಹ್ವಾನ ನೀಡಿದ್ದಾರೆ.
ಇದನ್ನೂ ಓದಿ :ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದ: ಕಾಗವಾಡದಲ್ಲಿ ಬೆಳಗಾವಿ ಜಿಲ್ಲಾಡಳಿತ ಕಟ್ಟೆಚರ