ಕರ್ನಾಟಕ

karnataka

ETV Bharat / state

ಮಹಾರಾಷ್ಟ್ರ ಸಚಿವದ್ವಯರ ಬೆಳಗಾವಿ ಭೇಟಿ ರದ್ದು - ಬೆಳಗಾವಿ ಭೇಟಿ ರದ್ದು

ಇಂದು ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಹಣದ ಕಾರ್ಯಕ್ರಮದ ಸಲುವಾಗಿ ಕರ್ನಾಟಕಕ್ಕೆ ಆಗಮಿಸಲು ಸಜ್ಜಾಗಿದ್ದ ಮಹಾರಾಷ್ಟ್ರ ಸಚಿವದ್ವಯರ ಭೇಟಿ ರದ್ದಾಗಿದೆ.

Etv Bharat
ಮಹಾರಾಷ್ಟ್ರ ಸಚಿವದ್ವಯರ ಬೆಳಗಾವಿ ಭೇಟಿ ರದ್ದು.!

By

Published : Dec 6, 2022, 6:52 AM IST

ಬೆಳಗಾವಿ: ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನದಂದು ಡಾ. ಬಿ.ಆರ್. ಶ್ರದ್ಧಾಂಜಲಿ ಸಲ್ಲಿಕೆಗೆ ಕರ್ನಾಟಕ ಸರ್ಕಾರ ಅವಕಾಶ ಕಲ್ಪಿಸಿದರೆ ಒಳ್ಳೆಯದಿತ್ತು. ಆದರೆ, ಕರ್ನಾಟಕ ಸರ್ಕಾರ ಈ ದಿನದಂದು ನಮಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೆಳಗಾವಿ ಭೇಟಿ ರದ್ದುಗೊಳಿಸಲಾಗಿದೆ ಎಂದು ಮಹಾರಾಷ್ಟ್ರ ಗಡಿ ಸಮನ್ವಯ ಸಚಿವ ಶಂಭುರಾಜ ದೇಸಾಯಿ ಸ್ಪಷ್ಟನೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿಸೆಂಬರ್ 3ರಂದು ಬೆಳಗಾವಿಗೆ ಭೇಟಿ ನೀಡಲು ನಾವು ನಿರ್ಧರಿಸಿದ್ದೆವು. ಕೆಲ ದಲಿತ ಸಂಘಟನೆಯವರು ಡಿ.6ರಂದು ಬೆಳಗಾವಿಗೆ ಬರುವಂತೆ ಆಹ್ವಾ‌ನ ನೀಡಿದ್ದರು. ಹೀಗಾಗಿ ಡಿ.6ರಂದು ಬೆಳಗಾವಿಗೆ ತೆರಳಲು ನಿರ್ಧರಿಸಿದ್ದೆವು. ಆದ್ರೆ ಡಾ. ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನ ಇದ್ದು, ಈ ದುಃಖದ ದಿನದಂದು ಶ್ರದ್ಧಾಂಜಲಿ ಸಲ್ಲಿಕೆ ವೇಳೆ ಅಹಿತಕರ ಘಟನೆಗಳು ನಡೆಯಬಾರದು. ಈ ದಿನ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಬಾರದು‌ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಮಹಾರಾಷ್ಟ್ರ ಸಚಿವರು, ಸಂಸದರಿಗೆ ಬೆಳಗಾವಿ ಪ್ರವೇಶ ನಿಷೇಧಿಸಿ ಡಿಸಿ ಆದೇಶ

ABOUT THE AUTHOR

...view details