ಕರ್ನಾಟಕ

karnataka

ETV Bharat / state

ಗೋಕಾಕ್​​​ ಶಾಸಕರಿಗೆ, ಸವದಿಗೆ ಸಚಿವ ಸಂಪುಟ ಸ್ಥಾನಮಾನ ಕೊಡಲಿ: ಮಹೇಶ್​ ಕುಮಠಳ್ಳಿ - ಕ್ಯಾಬಿನೆಟ್ ಸ್ಥಾನಮಾನ ಫಿಕ್ಸ್

ಹಲವು ಬಾರಿ ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ ಅಥಣಿ ಶಾಸಕರು ಸದ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬ ಹಿನ್ನೆಲೆ ಸಚಿವ ಸ್ಥಾನದ ಆಸೆ ಬಿಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಶಾಸಕ ಮಹೇಶ್ ಕುಮಠಳ್ಳಿ
ಶಾಸಕ ಮಹೇಶ್ ಕುಮಠಳ್ಳಿ

By

Published : Oct 3, 2022, 8:14 PM IST

ಅಥಣಿ: ಗೋಕಾಕ್​​ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಲಿ. ನನಗೆ ಸಚಿವ ಸ್ಥಾನಕ್ಕಿಂತಲೂ ನನ್ನ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದೆ. ನನಗೆ ಸಚಿವ ಸಂಪುಟದಲ್ಲಿ ಸ್ಥಾನ ಬೇಡ ಎಂದು ಶಾಸಕ ಮಹೇಶ್ ಕುಮಠಳ್ಳಿ ಅವರು ಹೇಳಿಕೆ ನೀಡಿದ್ದಾರೆ.

ಶಾಸಕ ಮಹೇಶ್ ಕುಮಠಳ್ಳಿ ಅವರು ಮಾತನಾಡಿದರು

ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ನೂತನ ಪೊಲೀಸ್ ಠಾಣೆ ಉದ್ಘಾಟನೆ ನೆರವೇರಿಸಿ ಮಾತನಾಡಿ, ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದೆ. ಅದರಿಂದ ನನಗೆ ಸಚಿವ ಸ್ಥಾನ ಬೇಡ ಎಂದು ಹೇಳಿ ನೀಡಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರಾ? ಎಂಬ ಪ್ರಶ್ನೆ ಮೂಡಿಸಿದೆ. ಹಲವು ಬಾರಿ ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ ಅಥಣಿ ಶಾಸಕರು ಸದ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬ ಹಿನ್ನೆಲೆ, ಸಚಿವ ಸ್ಥಾನದ ಆಸೆ ಬಿಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಗೋಕಾಕ್​ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಅಥಣಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರಿಗೆ ಈ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಲಿ ಹಾಗೂ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಅವರು ಈ ಬಾರಿ ಸಚಿವ ಸಂಪುಟ ಲಿಸ್ಟ್​ನಲ್ಲಿ ಇದ್ದಾರೆ. ಅವರಿಗೆ ಈ ಬಾರಿ ಕ್ಯಾಬಿನೆಟ್ ಸ್ಥಾನಮಾನ ಫಿಕ್ಸ್ ಎಂದು ಭವಿಷ್ಯ ನುಡಿದರು.

ಓದಿ:ಕಾಂಗ್ರೆಸ್​ನವರು ಹಗಲು ರಾತ್ರಿ ಸರ್ಕಸ್​ ಮಾಡಿದರೂ ಪಕ್ಷ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ

ABOUT THE AUTHOR

...view details