ಅಥಣಿ: ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ 30 ಲಕ್ಷ ರೂಪಾಯಿ ವೆಚ್ಚದಲ್ಲಿ ಮಾಧವಾನಂದ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ನೆರವೇರಿಸಿದರು.
ಮಾಧವಾನಂದ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಮಹೇಶ ಕುಮಟಳ್ಳಿ - Mahesh Kumatalli
ಅಥಣಿಯಲ್ಲಿ ಶಾಸಕ ಮಹೇಶ ಕುಮಟಳ್ಳಿ ರಡ್ಡೇರಹಟ್ಟಿ ಗ್ರಾಮದಲ್ಲಿ 30 ಲಕ್ಷ ರೂಪಾಯಿ ವೆಚ್ಚದಲ್ಲಿ ಮಾಧವಾನಂದ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ರಡ್ಡೇರಹಟ್ಟಿ ಗ್ರಾಮದಲ್ಲಿ ಶ್ರೀ ಮಲ್ಲೇಶ್ವರ ಮಹಾರಾಜರ ಮಠದ ಆವರಣದಲ್ಲಿ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅನುದಾನದ 30 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಮಾಧವಾನಂದ ಪ್ರಭುಜಿ ಸಮುದಾಯ ಭವನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಈ ನಾಡಿಗೆ ಸದ್ಗುರು ಮಾಧವಾನಂದ ಪ್ರಭುಜಿ ಅವರ ಕೊಡುಗೆ ಅಪಾರವಾಗಿದೆ ಎಂದರು.
ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಅವರ ಸೇವೆ ಸರ್ವ ಕಾಲಕ್ಕೂ ಅನುಪಮವಾಗಿದೆ. ಅವರ ಹೆಸರಿನಲ್ಲಿ ನಿರ್ಮಾಣವಾಗುತ್ತಿರುವ ಈ ಸಮುದಾಯ ಭವನ ಸಮಾಜಮುಖಿ ಕಾರ್ಯಗಳಿಗೆ ಸದುಪಯೋಗವಾಗಲಿ ಎಂದರು. ಇನ್ನು ಮುಂಬರುವ ದಿನಗಳಲ್ಲಿ ಗ್ರಾಮಕ್ಕೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಹಂತ ಹಂತವಾಗಿ ಕಲ್ಪಿಸಲಾಗುವುದು ಎಂದು ತಿಳಿಸಿದರು.