ಅಥಣಿ: ಕಳೆದ ಬಾರಿ ಕೃಷ್ಣಾನದಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದ ಸಂತ್ರಸ್ತರಿಗೆ ತ್ವರಿತಗತಿಯಲ್ಲಿ ಪರಿಹಾರ ನೀಡುವಂತೆ ಡಿಸಿಎಂ ಸವದಿ ಮತ್ತು ನಾನು ಜೊತೆಗೂಡಿ ಸಿಎಂರ ಬಳಿ ಚರ್ಚೆ ನಡೆಸಿದ್ದೇವೆ ಎಂದು ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು.
ನೆರೆ ಸಂತ್ರಸ್ತರಿಗೆ ಪರಿಹಾರ ಹಣ ತ್ವರಿತಗತಿಯಲ್ಲಿ ಬಿಡುಗಡೆ ಮಾಡಿಸಲಾಗುವುದು: ಶಾಸಕ ಮಹೇಶ್ ಕುಮಟಳ್ಳಿ - DCM savadi
ಕೃಷ್ಣಾನದಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದ ಸಂತ್ರಸ್ತರಿಗೆ ತ್ವರಿತಗತಿಯಲ್ಲಿ ಪರಿಹಾರ ನೀಡುವಂತೆ ಡಿಸಿಎಂ ಸವದಿ ಮತ್ತು ನಾನು ಜೊತೆಗೂಡಿ ಸಿಎಂರ ಬಳಿ ಚರ್ಚೆ ನಡೆಸಿದ್ದೇವೆ ಎಂದು ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು.
ಅವರು ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶಾಲೆ ಕೊಠಡಿಯ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಕಳೆದ ಬಾರಿಯ ಕೃಷ್ಣಾ ನದಿ ಪ್ರವಾಹದಲ್ಲಿ ಸಮಸ್ಯೆ ಎದುರಿಸಿದ ಶೇ.60ರಷ್ಟು ಸಂತ್ರಸ್ತರ ಪರಿಹಾರ ಹಣ ಸಂದಾಯವಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಪರಿಹಾರ ಹಣ ಬಿಡುಗಡೆ ವಿಳಂಬವಾಗಿದೆ. ಇನ್ನು ಕೆಲವು ನೆರೆ ಸಂಭವಿಸಿದ ಗ್ರಾಮದಲ್ಲಿ ಸಣ್ಣ ಲೋಪದೋಷಗಳಿಂದ ಸಂತ್ರಸ್ತರ ಖಾತೆಗಳಿಗೆ ಹಣ ಸಂದಾಯ ಬಾಕಿ ಉಳಿದಿದೆ. ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದು ಮಾಹಿತಿ ನೀಡಿದರು.
ರಾಜ್ಯ ಸರ್ಕಾರದಿಂದ ಅಥಣಿ ವಿಧಾನಸಭಾ ಕ್ಷೇತ್ರಕ್ಕೆ 550 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಬಿ.ಎಸ್ ಯಡಿಯೂರಪ್ಪ ಸರ್ಕಾರ ಹಾಗೂ ಹಿಂದಿನ ಸರ್ಕಾರಗಳಿಂದ ಹಣ ಬಿಡುಗಡೆ ಮಾಡಲಾಗಿದೆ. ಅಥಣಿ ಪಟ್ಟಣ ಅಭಿವೃದ್ಧಿಗೆ 22 ಕೋಟಿಗೂ ಅಧಿಕ ಹಣ ಖರ್ಚು ಮಾಡಲಾಗಿದೆ. ಅಥಣಿ ಪೂರ್ವ ಭಾಗದ ರಸ್ತೆಗಳನ್ನು ಹಂತಹಂತವಾಗಿ ಸುಗಮ ಸಂಚಾರ ರಸ್ತೆ ನಿರ್ಮಾಣ ಮಾಡಲಾಗುವುದು ಎಂದರು.