ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ಮಾಡುತ್ತಾರೆ ಎಂಬುದು ಮಾಧ್ಯಮಗಳಿಂದ ಕೇಳಿ ಬರುತ್ತಿದೆ. ಭಾರತೀಯ ಜನತಾ ಪಕ್ಷದ ವರಿಷ್ಠರು ಯಾವುದೇ ತೀರ್ಮಾನ ತೆಗೆದುಕೊಂಡರೂ ನಾವು ಬದ್ಧರಾಗಿದ್ದೇವೆ ಎಂದು ಅಥಣಿ ಶಾಸಕ ಹಾಗೂ ಕೊಳಗೇರಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ್ ಕುಮಟಳ್ಳಿ ಹೇಳಿದರು.
ಬೆಳಗಾವಿ ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೂ ಒಳ್ಳೆಯ ಸುದ್ದಿ ಬರುತ್ತೆ ಅಂತಾ ಹೇಳಿದ್ದಾರೆ. ನನಗೆ ಈಗಾಗಲೇ ಸಿಹಿ ಸುದ್ದಿ ಬಂದಿದೆ, ಏನು ಅಂದ್ರೆ ಅಮ್ಮಜೇಶ್ವರಿ ಏತ ನೀರಾವರಿ ಯೋಜನೆಯನ್ನು ಕಳೆದ ಸಚಿವ ಸಂಪುಟದಲ್ಲಿ ನೀಡಿದ್ದಾರೆ. ಸರಿಸುಮಾರು 1,486 ಕೋಟಿ ರೂಪಾಯಿ ವೆಚ್ಚದಲ್ಲಿ ಬಹುದಿನಗಳ ಕಾಮಗಾರಿ ಮಂಜೂರು ಮಾಡಿದ್ದಾರೆ. ಇದರಿಂದಾಗಿ ನನಗೆ ಸಚಿವ ಸ್ಥಾನಕ್ಕಿಂತಲೂ ಬೃಹತ್ ನೀರಾವರಿ ಯೋಜನೆ ನೀಡಿದ್ದಾರೆ. ಇದು ನನಗೆ ಸಿಹಿ ಸುದ್ದಿ ಎಂದು ಹೇಳಿದರು.