ಬೆಳಗಾವಿ: ಡೆತ್‌ನೋಟ್ ಬರೆದಿತ್ತು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಹರು ನಗರದಲ್ಲಿ ನಡೆದಿದೆ. ತಾಲೂಕಿನ ಮಚ್ಛೆಯಯಲ್ಲಿರುವ ನೆಹರು ನಗರದ ನಿವಾಸಿ ಸಾವಿಯೋ ಪಿಳೈ (28) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಪ್ರಭಾವಿ ರಾಜಕಾರಣಿಯ ಆಪ್ತ ಮತ್ತು ಪೊಲೀಸರ ಕಿರುಕುಳಕ್ಕೆ ಬೇಸತ್ತಿರುವುದಾಗಿ ಡೆತ್ನೋಟ್ನಲ್ಲಿ ಮೃತ ವ್ಯಕ್ತಿ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಸಾವಿಯ ಪಿಳೈ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೋರ್ವಳ ಜೊತೆ ಅಕ್ರಮ ಸಂಬಂಧ ಹೊಂದಿದ್ದನಂತೆ. ಇಬ್ಬರ ಮಧ್ಯೆ ಮನಸ್ತಾಪವಾಗಿ ಪ್ರಕರಣ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಈ ಪ್ರಕರಣ ಸಂಬಂಧ ಪಿಎಸ್‌ಐ, ಪೃಥ್ವಿ ಸಿಂಗ್ ಅವರು ಹಣ ನೀಡುವಂತೆ ಕಿರಕುಳ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ.