ಬೆಳಗಾವಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಮನನೊಂದ ವ್ಯಕ್ತಿ ಮರಣ ಪತ್ರ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಈ ಘಟನೆ ಅನಗೊಳದ ಬೆಂಡಿಗೇರಿ ಚಾಳದಲ್ಲಿ ನಡೆದಿದೆ.
ಮದ್ಯ ಸಿಗದಿದ್ದಕ್ಕೆ ಮರಣಪತ್ರ ಬರೆದಿಟ್ಟು ಸಾವಿಗೆ ಶರಣಾದ ಬೆಳಗಾವಿಯ ವ್ಯಕ್ತಿ - Belgaum Crime News
ಮದ್ಯ ಸಿಗದಿದ್ದಕ್ಕೆ ಮನನೊಂದು ಡೆತ್‌ನೋಟ್ ಬರೆದಿಟ್ಟ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವ್ಯಕ್ತಿ ಆತ್ಮಹತ್ಯೆ
ಸಲೂನ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ದೇವೇಂದ್ರಪ್ಪ ಹಡಪದ (42) ಆತ್ಮಹತ್ಯೆಗೆ ಶರಣಾದ ದುರ್ದೈವಿ. ದೇವೇಂದ್ರಪ್ಪ ಮೂಲತಃ ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನಿವಾಸಿಯಾಗಿದ್ದು, ಬೆಂಡಿಗೇರಿ ಚಾಳ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿಗಿದ್ದರು.
ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.