ಚಿಕ್ಕೋಡಿ :ಕುಡಿಯಲು ನೀರು ತರಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಲಿಹಡಗಲಿ ಗ್ರಾಮದಲ್ಲಿ ನಡೆದಿದೆ.
ನೀರಿನ ದಾಹ ತೀರಿಸಿಕೊಳ್ಳಲು ಹೋಗಿ ವ್ಯಕ್ತಿ ದುರ್ಮರಣ - undefined
ಕೃಷಿ ಹೊಂಡಕ್ಕೆ ನೀರು ತರಲು ತೆರಳಿದ್ದ ವ್ಯಕ್ತಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವ್ಯಕ್ತಿ ದುರ್ಮರಣ
ತಾಲೂಕಿನ ಯಕ್ಕಂಚಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ (33), ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದ ವ್ಯಕ್ತಿ. ಯಕ್ಕಂಚಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಬರ ಹಿನ್ನೆಲೆಯಲ್ಲಿ, ಕೃಷಿ ಹೊಂಡಕ್ಕೆ ತೆರಳಿದ್ದ ಮಲ್ಲಿಕಾರ್ಜುನ, ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.
ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.