ಬೆಳಗಾವಿ : ನಗರದ ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಬೇಜವಾಬ್ದಾರಿತನಕ್ಕೆ ಖಾನಾಪುರದ 38 ವರ್ಷದ ವ್ಯಕ್ತಿಯೊಬ್ಬರು ವೆಂಟಿಲೇಟರ್ ಇಲ್ಲದೇ ನರಳಿ ನರಳಿ ಸಾವನ್ನಪ್ಪಿರುವ ಅಮಾನವೀಯ ಘಟನೆ ನಡೆದಿದೆ.
ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಗ್ರಾಮದ 38 ವರ್ಷದ ವ್ಯಕ್ತಿ ಕೊರೊನಾ ದೃಢವಾಗಿದ್ದ ಹಿನ್ನೆಲೆ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಸೂಕ್ತ ಸಮಯಕ್ಕೆ ವೆಂಟಿಲೇಟರ್ ಸಿಗದಿದ್ದಕ್ಕೆ ಇಂದು ಬೆಳಗ್ಗೆ ಸಾವನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.