ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಪ್ರತಿಭಟನೆ - ಬೆಳಗಾವಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ

ಮೂರುವರೆ ವರ್ಷದ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಬೆಳಗಾವಿಯ ಬಾಪಟ್ ಗಲ್ಲಿಯಲ್ಲಿ ಸಂಜೆ ಒಂದು ಗಂಟೆ ಅಂಗಡಿ ಮುಂಗಟ್ಟು ಬಂದ್ ಮಾಡಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು.

ಮೂರುವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ
Man raped three year girl in Belgaum

By

Published : Jul 28, 2021, 10:52 PM IST

ಬೆಳಗಾವಿ:ಮೂರುವರೆ ವರ್ಷದ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿ ವಿರುದ್ಧ ಪ್ರತಿಭಟನೆ ನಡೆಸಿದ ವ್ಯಾಪಾರಸ್ಥರು

ಪ್ರಕರಣ ಸಂಬಂಧ ಬೆಳಗಾವಿ ಕ್ಯಾಂಪ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮುಂಬೈ ಮೂಲದ ವ್ಯಕ್ತಿ ಬೆಳಗಾವಿಯ ಸಂಬಂಧಿಕರ ಮನೆಯಲ್ಲಿ ಕೆಲ ದಿನಗಳಿಂದ ವಾಸವಾಗಿದ್ದ. ಪಕ್ಕದ ಮನೆಯ ಬಾಲಕಿ ಮನೆ ಮುಂದೆ ಆಟವಾಡುವಾಗ ಪುಸಲಾಯಿಸಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಪೋಷಕರು ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಮರ್ಯಾದೆಗೆ ಅಂಜಿ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಆದರೆ ಈ ವಿಷಯ ಬಾಲಕಿಯ ಸಂಬಂಧಿಕರಿಗೆ ತಿಳಿದಿದೆ.

ಆರೋಪಿಯನ್ನು ಬಾಲಕಿಯ ಸಂಬಂಧಿಕರು ಹಾಗೂ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಆರೋಪಿ ವಿರುದ್ಧ ಪೊಲೀಸರು ಪೊಕ್ಸೊ ಕೇಸ್‌ ದಾಖಲಿಸಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಬೆಳಗಾವಿಯ ಬಾಪಟ್ ಗಲ್ಲಿಯಲ್ಲಿ ಸಂಜೆ ಒಂದು ಗಂಟೆ ಅಂಗಡಿ ಮುಂಗಟ್ಟು ಬಂದ್ ಮಾಡಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು.

ABOUT THE AUTHOR

...view details