ಕರ್ನಾಟಕ

karnataka

ETV Bharat / state

ಮರಕ್ಕೆ ಕಟ್ಟಿಹಾಕಿ ವ್ಯಕ್ತಿ ಮೇಲೆ ಹಲ್ಲೆ.. ಬೆಳಗಾವಿ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥ ಸಾವು - Belagavi man assaulted

ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆತ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಹಲ್ಲೆ
assault

By

Published : Aug 24, 2022, 8:54 AM IST

Updated : Aug 24, 2022, 9:30 AM IST

ಬೆಳಗಾವಿ: ಗ್ರಾಮಸ್ಥರು ಮಾನಸಿಕ ಅಸ್ವಸ್ಥ ಎನ್ನಲಾದ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದು, ಚಿಕಿತ್ಸೆ ಫಲಿಸದೇ ಆತ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬಸವನಕುಡಚಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದ ಗಾಂಧಿ ಗಲ್ಲಿಯ ನಿವಾಸಿ ವಿಶಾಲ ಕಲ್ಲಪ್ಪಾ ಪಟಾಯಿ (28) ಸಾವನ್ನಪ್ಪಿದವ. ಕಳೆದ ನಾಲ್ಕು ದಿನಗಳ ಹಿಂದೆ ಮಾನಸಿಕ ಅಸ್ವಸ್ಥನಂತೆ ಗ್ರಾಮಗಳಲ್ಲಿ ಓಡಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದನಂತೆ.

ಇದನ್ನೂ ಓದಿ:ಕೈ ಮುರಿದ ವ್ಯಕ್ತಿ ಮೇಲೆ ಹಲ್ಲೆ: ವಿಡಿಯೋ ವೈರಲ್ ಬೆನ್ನಲ್ಲೇ ಹೆಚ್ಚಿನ ತನಿಖೆಗೆ ಸೂಚಿಸಿದ ಎಸ್​ಪಿ

ಇದಲ್ಲದೇ, ನಾಲ್ಕು ದಿನಗಳ ಹಿಂದೆ ಕಲ್ಲಿನಿಂದ ಸುಮಾರು 9 ಶಿಕ್ಷಕರ ಮೇಲೆ ಹಲ್ಲೆ ಮಾಡಿದ್ದನಂತೆ. ಈ ವೇಳೆ, ಗಾಯಗೊಂಡಿದ್ದ ಶಿಕ್ಷಕರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಇದೇ ದಿನ ಸಾಯಂಕಾಲ ಗ್ರಾಮದ ಕೆಲ ಜನ ಸೇರಿಕೊಂಡು ಮಾನಸಿಕ ಅಸ್ವಸ್ಥನನ್ನು ಮರಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿಸಿದ್ದಾರೆ. ಬಳಿಕ ಆತನನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾನೆ. ಈ ಕುರಿತು ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ತರಕಾರಿ ತನ್ನಿ ಎಂದು ಹೇಳಿದ್ದೇ ತಪ್ಪಾಯ್ತು: ನಡುರಸ್ತೆಯಲ್ಲೇ ಪತ್ನಿ ಮೇಲೆ ಅಮಾನುಷ ಹಲ್ಲೆ

Last Updated : Aug 24, 2022, 9:30 AM IST

ABOUT THE AUTHOR

...view details