ಬೆಳಗಾವಿ : ಲೋಕಸಭೆ ಉಪಚುನಾವಣೆ ಫಲಿತಾಂಶ ಪ್ರಕಟಗೊಳ್ಳಲು ಐದು ದಿನ ಬಾಕಿ ಇರುವಾಗಲೇ ದಿ. ಸುರೇಶ ಅಂಗಡಿ ಪತ್ನಿ ಹಾಗೂ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮಂಗಳಾ ಅವರು ಈ ಕುರಿತುಫೇಸ್ಬುಕ್ನಲ್ಲಿ ಪ್ರಕಟಿಸಿದ್ದು, ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆ. ರೋಗಲಕ್ಷ್ಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಹೋಮ್ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಕೋರಿದ್ದಾರೆ.