ಕರ್ನಾಟಕ

karnataka

ETV Bharat / state

ಮಹಾರಾಷ್ಟ್ರದ ಹಲವು ಗ್ರಾಮಗಳು ಕರ್ನಾಟಕಕ್ಕೆ ಸೇರಲು ನಿರ್ಣಯ - ಮಹಾರಾಷ್ಟ್ರ ಬೆಳಗಾವಿ ಗಡಿ ವಿಚಾರ

ಕನ್ನಡಿಗರೇ ಹೆಚ್ಚು ವಾಸ ಮಾಡುತ್ತಿರುವ ಅಕ್ಕಲಕೋಟ್ ತಾಲೂಕಿನ 44ಕ್ಕೂ ಆಧಿಕ ಗ್ರಾಮಗಳ ಜನರು ಕರ್ನಾಟಕ ಸೇರಲು ನಿರ್ಧಾರ ಕೈಗೊಂಡಿದ್ದಾರೆ. ಗ್ರಾಮಗಳ ಮಂಡಲಗಳಲ್ಲಿ ಕರ್ನಾಟಕ ಸೇರಲು ಠರಾವು ಪಾಸ್ ಮಾಡಿದ್ದಾರೆ.

ಮಹಾರಾಷ್ಟ್ರದ ಹಲವು ಗ್ರಾಮಗಳು ಕರ್ನಾಟಕಕ್ಕೆ ಸೇರಲು ನಿರ್ಣಯ
ಮಹಾರಾಷ್ಟ್ರದ ಹಲವು ಗ್ರಾಮಗಳು ಕರ್ನಾಟಕಕ್ಕೆ ಸೇರಲು ನಿರ್ಣಯ

By

Published : Nov 29, 2022, 2:44 PM IST

ಬೆಳಗಾವಿ:ಮಹಾರಾಷ್ಟ್ರ- ಬೆಳಗಾವಿ ಗಡಿ ವಿಚಾರ ಮತ್ತೆ ಭುಗಿಲೆದ್ದಿದ್ದು, ಎರಡು ರಾಜ್ಯಗಳಲ್ಲಿ ಸಾಕಷ್ಟು ವಾದ - ಪ್ರತಿವಾದಕ್ಕೆ ಕಾರಣವಾಗಿದೆ. ಈ ನಡುವೆ ಮಹಾರಾಷ್ಟ್ರ ಬಿಟ್ಟು ಕರ್ನಾಟಕ ಸೇರಲು ಸೊಲ್ಲಾಪುರ ಜಿಲ್ಲೆ ಅಕ್ಕಲಕೋಟ್ ತಾಲೂಕಿನ ಜನರ ನಿರ್ಧಾರ ಮಾಡಿದ್ದಾರೆ.

ಕನ್ನಡಿಗರೇ ಹೆಚ್ಚು ವಾಸ ಮಾಡುತ್ತಿರುವ ಅಕ್ಕಲಕೋಟ್ ತಾಲೂಕಿನ 44ಕ್ಕೂ ಅಧಿಕ ಗ್ರಾಮಗಳ ಜನರು ಕರ್ನಾಟಕ ಸೇರಲು ನಿರ್ಧಾರ ಕೈಗೊಂಡಿದ್ದಾರೆ. ಗ್ರಾಮಗಳ ಮಂಡಲಗಳಲ್ಲಿ ಕರ್ನಾಟಕ ಸೇರಲು ಠರಾವು ಪಾಸ್ ಮಾಡಿದ್ದಾರೆ. ಈ ಸಂಬಂದ ಮಾತನಾಡಿರುವ ಗ್ರಾಮಸ್ಥರು ಮಹಾರಾಷ್ಟ್ರದಿಂದ ನಮಗೆ ಅನ್ಯಾಯವಾಗಿದೆ. ಕನ್ನಡಿಗರು ಇರುವ ಭಾಗದಲ್ಲಿ ಮಹಾರಾಷ್ಟ್ರ ಯಾವುದೇ ಅಭಿವೃದ್ಧಿ ಮಾಡಿಲ್ಲ. ಈ ಹಿನ್ನೆಲೆ ಗ್ರಾಮಸ್ಥರು ಈ ನಿರ್ಧಾರ ನಡೆಸಿದ್ದು, ನಮ್ಮನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಾಂಗ್ಲಿ ಕನ್ನಡಿಗರು ಸಹ ಮಹಾರಾಷ್ಟ್ರ ಬಿಡಲು ರೆಡಿ:ಮಹಾರಾಷ್ಟ್ರ ಸಾಂಗ್ಗಿ ಗ್ರಾಮಸ್ಥರು ಸಹ ಕರ್ನಾಟಕ ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ. ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಸಿದ್ದನಾಥ ಗ್ರಾಮಸ್ಥರು ಕರ್ನಾಟಕ ಸೇರಲು ನಿರ್ಣಯ ಕೈಗೊಂಡಿದ್ದಾರೆ.‌ ಗ್ರಾಮದಲ್ಲಿ ಸಭೆ ನಡೆಸಿದ ಗ್ರಾಮಸ್ಥರು ‌ಮಹಾರಾಷ್ಟ್ರ ಸರ್ಕಾರ ಕನ್ನಡಿಗರು ವಾಸಿಸುವ ಗ್ರಾಮಗಳ ಅಭಿವೃದ್ಧಿ ಮಾಡದೇ ತಾರತಮ್ಯ ಎಸಗುತ್ತಿರುವ ಕಾರಣ ಕರ್ನಾಟಕಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ‌ ಮಾಡಿ ಗ್ರಾಮಸ್ಥರು ಕೈಗೊಂಡ ನಿರ್ಣಯವನ್ನು ತಿಳಿಸಲಿದ್ದೇವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದ.. ರಾಜ್ಯದ ಪರ ಸಮರ್ಥ ವಾದ ಮಂಡನೆ: ಸಿಎಂ ಬೊಮ್ಮಾಯಿ

ABOUT THE AUTHOR

...view details