ಬೆಳಗಾವಿ:ಸಾಮಾಜಿಕ ಜಾಲತಾಣದಲ್ಲಿ ಶಿವಾಜಿ ಮಹಾರಾಜರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮರಾಠಾ ಸಮುದಾಯದ ಮುಖಂಡರು ಬೆಳಗಾವಿ ಸೈಬರ್ ಕ್ರೈಂ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.
ಸೈಬರ್ ಕ್ರೈಂ ಠಾಣೆ ಎದುರು ಧರಣಿ ನಡೆಸಿದ ವಿವಿಧ ಮರಾಠಿ ಸಂಘಟನೆಗಳು, ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿವಾದ ಸುಖಾಂತ್ಯವಾಗಿದೆ. ರಾಯಣ್ಣ ಮತ್ತು ಶಿವಾಜಿ ದೇಶದ ಆಸ್ತಿ ಎಂದು ಗ್ರಾಮಸ್ಥರೇ ವಿವಾದ ಇತ್ಯರ್ಥಗೊಳಿಸಿದ್ದಾರೆ. ಆದ್ರೆ, ರಾಯಣ್ಣ ಮತ್ತು ಶಿವಾಜಿ ಮಹಾರಾಜರ ಅನುಯಾಯಿಗಳ ಮಧ್ಯೆ ವಿವಾದದ ಕಿಚ್ಚು ಹೊತ್ತಿಕೊಂಡಿದೆ. ವಲಸಿಗರನ್ನು ಓಡಿಸಿ ಕರ್ನಾಟಕವನ್ನು ಉಳಿಸಿ ಎಂದು ಫೇಸ್‍ಬುಕ್ ಪೇಜ್‍ನಲ್ಲಿ ಪೋಸ್ಟ್ ಹಾಕಿ ಶಿವಾಜಿ ಮಹಾರಾಜರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಆರೋಪಿಸಿದರು.