ಬೆಳಗಾವಿ: ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕ್ಯಾಂಪ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ : ಇಬ್ಬರು ಆರೋಪಿಗಳ ಬಂಧನ - Marijuana selling in public place
ಬೆಳಗಾವಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕ್ಯಾಂಪ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
Belgavi
ಕ್ಯಾಂಪ್ ನಿವಾಸಿ ಉತ್ಕರ್ಷ ಅಲಿಯಾಸ್ ಬಾಬು ವರ್ಮಾ, ಮಾದ್ವಾ ರಸ್ತೆಯ ನಿವಾಸಿ ಮಯೂರ್ ರಾಹುತ್ ಬಂಧಿತ ಆರೋಪಿಗಳು. ಇವರು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು, ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 750 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.