ಬೆಳಗಾವಿ:ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆ ಇಂದು ಗೋಕಾಕ್ನಲ್ಲಿರುವ ಅವರ ನಿವಾಸದಲ್ಲಿ ಕಾರ್ಯಕರ್ತರು ಸಭೆ ನಡೆಸುತಿದ್ದಾರೆ.
ರಮೇಶ್ ಜಾರಕಿಹೊಳಿ ರಾಜೀನಾಮೆ: ಬೆಂಬಲಿಗರಿಂದ ಸಭೆ - Ramesh Jarkiholi
ರಮೇಶ್ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆಯಲ್ಲಿ ಗೋಕಾಕ್ನಲ್ಲಿರುವ ಅವರ ನಿವಾಸದಲ್ಲಿ ಇಂದು ಸಭೆ ನಡೆಯುತ್ತಿದೆ.
ರಮೇಶ್ ಜಾರಕಿಹೊಳಿ ಕಾರ್ಯಕರ್ತರ ಸಭೆ
ಮನೆಯ ಮುಂಭಾಗದ ಆವರಣದಲ್ಲಿ ನೂರಾರು ಕುರ್ಚಿಗಳನ್ನು ಹಾಕಲಾಗಿದ್ದು, ಕಾರ್ಯಕರ್ತರು ಹಾಗೂ ಬೆಂಬಲಿಗರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಅಳಿಯ ಅಂಬಿರಾವ್ ಪಾಟೀಲ್ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದ್ದು, ಸಭೆಗೆ ಬರುವ ಕಾರ್ಯಕರ್ತರಿಗೆ ಊಟ ಮತ್ತು ಉಪಹಾರದ ವ್ಯವಸ್ಥೆ ಸಹ ಮಾಡಲಾಗಿದೆ.
Last Updated : Jul 8, 2019, 12:36 PM IST