ಬೆಳಗಾವಿ :ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿನ ಕುರಿತು ಎಂಇಎಸ್, ಕಾಂಗ್ರೆಸ್ ಸೇರಿ ಇತರ ಪರಾಜಿತ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದಾರೆ.
ಪಾಲಿಕೆ ಚುನಾವಣೆ ಫಲಿತಾಂಶ ಪಾರದರ್ಶಕವಾಗಿಲ್ಲ ಎಂದು ಆರೋಪಿಸಿರುವ ಪರಾಜಿತರು, ಫಲಿತಾಂಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲು ನಿರ್ಣಯ ಕೈಗೊಂಡಿದ್ದಾರೆ. ಇವಿಎಂ ಜೊತೆ ವಿವಿಪ್ಯಾಟ್ ಬಳಸದೇ ಕಾನೂನುಬಾಹಿರವಾಗಿ ಚುನಾವಣಾ ಪ್ರಕ್ರಿಯೆ ನಡೆಸಲಾಗಿದೆ. ನಾಡದ್ರೋಹಿ ಎಂಇಎಸ್ ಜತೆಗೆ ಕಾಂಗ್ರೆಸ್, ಆಪ್, ಪಕ್ಷೇತರ ಪರಾಜಿತ ಅಭ್ಯರ್ಥಿಗಳ ಸಭೆ ನಡೆಸಿ ಈ ನಿರ್ಣಯ ಕೈಗೊಂಡಿದ್ದಾರೆ.
ಬೆಳಗಾವಿಯ ಮರಾಠಾ ಮಂದಿರದಲ್ಲಿ ಸಭೆ ನಡೆಸಿರುವ ಪರಾಜಿತ ಅಭ್ಯರ್ಥಿಗಳು, ಆಗಸ್ಟ್ 31ರಂದೇ ಇವಿಎಂ ಜೊತೆ ವಿವಿಪ್ಯಾಟ್ ಇರದ ಬಗ್ಗೆ ವಿರೋಧ ವ್ಯಕ್ತಪಡಿಸಲಾಗಿತ್ತು. ಆದರೂ ನಮ್ಮ ಮನವಿಗೆ ಚುನಾವಣೆ ಅಧಿಕಾರಿಗಳು ಸ್ಪಂದಿಸಿಲ್ಲ. ಎಂಇಎಸ್, ಕಾಂಗ್ರೆಸ್, ಆಪ್, ಪಕ್ಷೇತರ ಅಭ್ಯರ್ಥಿಗಳಿಗೆ ಅನ್ಯಾಯ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.