ಚಿಕ್ಕೋಡಿ: ಮಾನಸಿಕವಾಗಿ ಅಸ್ವಸ್ಥಗೊಂಡ ಪಿಗ್ಮಿ ಏಜೆಂಟ್ನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಕೌಟುಂಬಿಕ ಕಲಹ: ಪಿಗ್ಮಿ ಏಜೆಂಟ್ ಆತ್ಮಹತ್ಯೆ - ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ವ್ಯಕ್ತಿ ಆತ್ಮಹತ್ಯೆ
ಕೌಟುಂಬಿಕ ಕಲಹದೊಂದಿಗೆ ಮಾನಸಿಕವಾಗಿ ಅಸ್ವಸ್ಥಗೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
![ಕೌಟುಂಬಿಕ ಕಲಹ: ಪಿಗ್ಮಿ ಏಜೆಂಟ್ ಆತ್ಮಹತ್ಯೆ Mental illness Committed suicide in kagavada](https://etvbharatimages.akamaized.net/etvbharat/prod-images/768-512-7363416-thumbnail-3x2-smk.jpg)
ಮಾನಸಿಕ ಅಸ್ವಸ್ಥ ಪಿಗ್ಮಿ ಏಜೆಂಟ್ ಆತ್ಮಹತ್ಯೆ
ಐನಾಪೂರ ಪಟ್ಟಣದ ಸಿದ್ದಪ್ಪ ನರಸಪ್ಪ ಹುದ್ದಾರ(51) ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹದೊಂದಿಗೆ ಮಾನಸಿಕವಾಗಿ ಅಸ್ವಸ್ಥಗೊಂಡು ನೇಣಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
ಈತ ಹಲವು ವರ್ಷಗಳಿಂದ ಐನಾಪೂರ ಪಟ್ಟಣದ ಶ್ರೀ ಸಿದ್ಧೇಶ್ವರ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯಲ್ಲಿ ಪಿಗ್ಮಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.