ಚಿಕ್ಕೋಡಿ:ಮಾನಸಿಕ ಅಸ್ವಸ್ಥನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಮಾನಸಿಕ ಅಸ್ವಸ್ಥ ಆತ್ಮಹತ್ಯೆಗೆ ಶರಣು - ಸಂಕೇಶ್ವರ ಪೊಲೀಸ್ ಠಾಣೆ
ಕಳೆದ ಆರು ತಿಂಗಳಿನಿಂದ ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ ಪಡೆಯುತ್ತಿದ್ದ ಹೆಬ್ಬಾಳ ಗ್ರಾಮದ ನಿವಾಸಿವೋರ್ವ ತಮ್ಮ ಮನೆಯ ಸ್ನಾನದ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ.
ಚಂದ್ರಕಾಂತ ಕೆಂಪಣ್ಣಾ ಚೌಹಾಣ
ಹೆಬ್ಬಾಳ ಗ್ರಾಮದ ಚಂದ್ರಕಾಂತ ಕೆಂಪಣ್ಣಾ ಚೌಹಾಣ (25) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕಳೆದ ಆರು ತಿಂಗಳಿನಿಂದ ಮಾನಸಿಕವಾಗಿ ಅಸ್ವಸ್ಥತೆಗೆ ಚಿಕಿತ್ಸೆ ಪಡೆಯುತ್ತಿದ್ದ ಚಂದ್ರಕಾಂತ ತಮ್ಮ ಸ್ವಂತ ಮನೆಯ ಸ್ನಾನದ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.