ಕರ್ನಾಟಕ

karnataka

ETV Bharat / state

ಕನ್ನಡ ಧ್ವಜಸ್ತಂಭ ತೆರವಿಗೆ ಆಗ್ರಹಿಸಿ ಎಂಇಎಸ್ ಪ್ರತಿಭಟನೆ: ’ಮಹಾ’ ಶಿವಸೇನೆ ನಾಯಕರ ಗಡಿಪ್ರವೇಶಕ್ಕೆ ನಿಷೇಧ - Shiv Sena leaders in Maharashtra banned for crossing Belagavi border

ಬೆಳಗಾವಿ ಮಹಾನಗರ ಪಾಲಿಕೆ ಎದುರಿನ ಕನ್ನಡ ಧ್ವಜಸ್ತಂಭ ತೆರವಿಗೆ ಆಗ್ರಹಿಸಿ ಮಾರ್ಚ್ 8 ರಂದು ಎಂಇಎಸ್ ಪ್ರತಿಭಟನೆ ಹಮ್ಮಿಕೊಂಡಿರುವ ಕಾರಣ ನಾಳೆ ಬೆಳಗ್ಗೆ 6 ಗಂಟೆಯಿಂದ ಮಾರ್ಚ್​ 9 ರ ಬೆಳಗ್ಗೆ 6 ಗಂಟೆಯವರೆಗೆ ಬೆಳಗಾವಿ ಗಡಿಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

MES protests in Belagavi demanding Kannada flag issue
ಬೆಳಗಾವಿಯಲ್ಲಿ ಕನ್ನಡ ಧ್ವಜಸ್ತಂಭ ತೆರವಿಗೆ ಆಗ್ರಹಿಸಿ ಎಂಇಎಸ್ ಪ್ರತಿಭಟನೆMES protests in Belagavi demanding Kannada flag issue

By

Published : Mar 6, 2021, 5:36 PM IST

ಬೆಳಗಾವಿ: ನಾಳೆಯಿಂದ ಎರಡು ದಿನಗಳ ಕಾಲ ಮಹಾರಾಷ್ಟ್ರದ ಶಿವಸೇನೆ ನಾಯಕರ ಬೆಳಗಾವಿ ಗಡಿ ಪ್ರವೇಶಕ್ಕೆ ನಿಷೇಧ ಹೇರಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿವಸೇನೆ ಅಧ್ಯಕ್ಷ ವಿಜಯ ದೇವಣೆ ಸೇರಿ ಹಲವು ಮುಖಂಡರ ಗಡಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಮಾರ್ಚ್​ 9 ರ ಬೆಳಗ್ಗೆ 6 ಗಂಟೆಯವರೆಗೆ ಗಡಿಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಬೆಳಗಾವಿ ಮಹಾನಗರ ಪಾಲಿಕೆ ಎದುರಿನ ಕನ್ನಡ ಧ್ವಜಸ್ತಂಭ ತೆರವಿಗೆ ಆಗ್ರಹಿಸಿ ಮಾರ್ಚ್ 8 ರಂದು ಎಂಇಎಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಧ್ವಜಸ್ತಂಭ ತೆರವು ಮಾಡದಿದ್ದರೆ ಭಗವಾ ಧ್ವಜ ಅಳವಡಿಕೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಎಂಇಎಸ್ ಪ್ರತಿಭಟನೆ ಮಾಡುತ್ತಿದೆ.

ಇದನ್ನೂ ಓದಿ:ಕೊರೊನಾ ಲಸಿಕೆ ಪಡೆದ ಇಸ್ರೋ ಮುಖ್ಯಸ್ಥ ಡಾ. ಕೆ.ಶಿವನ್

ಈ ಪ್ರತಿಭಟನೆಯಲ್ಲಿ ಮಹಾರಾಷ್ಟ್ರದ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಪ್ರಚೋದನಾಕಾರಿ ಭಾಷಣ ಮಾಡಿ ಗಡಿಯಲ್ಲಿ ಶಾಂತಿ ‌ಭಂಗ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ನಗರಕ್ಕೆ ಎರಡು ದಿನಗಳ ಕಾಲ ಮಹಾರಾಷ್ಟ್ರ ನಾಯಕರ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details