ಕರ್ನಾಟಕ

karnataka

ETV Bharat / state

ಬೆಳಗಾವಿಯಿಂದ ಗೋರಖ್​ಪುರದತ್ತ ಪ್ರಯಾಣ ಬೆಳೆಸಿದ ವಲಸೆ ಕಾರ್ಮಿಕರು

ಲಾಕ್​ಡೌನ್ ಹಿನ್ನೆಲೆಯಲ್ಲಿ ಸಾರಿಗೆ ಸೌಲಭ್ಯ ಇಲ್ಲದೇ ಸಂಕಷ್ಟಕ್ಕೆ ಒಳಗಾಗಿದ್ದ ಕರ್ನಾಟಕ ಹಾಗೂ ಗೋವಾ ರಾಜ್ಯಗಳ 1,700 ಕಾರ್ಮಿಕರನ್ನು ವಿಶೇಷ ಶ್ರಮಿಕ್​ ರೈಲು ಮೂಲಕ ಗೋರಖ್​ಪುರಕ್ಕೆ ಕಳುಹಿಸಿಕೊಡಲಾಗಿದೆ. ಇನ್ನು ಕಾರ್ಮಿಕರಿಗೆ ಆಹಾರದ ವ್ಯವಸ್ಥೆ ಹಾಗೂ ನೀರಿನ ಬಾಟಲಿ ನೀಡಿರುವ ಬಗ್ಗೆ ಸ್ವತಃ ಸಚಿವ ಸುರೇಶ್ ಅಂಗಡಿ ನಿಲ್ದಾಣಕ್ಕೆ ಆಗಮಿಸಿ ಖಚಿತಪಡಿಸಿಕೊಂಡು, ಕಾರ್ಮಿಕರನ್ನು ಬೀಳ್ಕೊಟ್ಟಿದ್ದಾರೆ.

Migrant workers boarded the Gorakhpur Shramik train from Belgaum
ಬೆಳಗಾವಿಯಿಂದ ಗೋರಖ್​ಪುರ ಶ್ರಮಿಕ್ ರೈಲು ಏರಿದ ವಲಸೆ ಕಾರ್ಮಿಕರು

By

Published : May 30, 2020, 10:53 PM IST

ಬೆಳಗಾವಿ: ಕರ್ನಾಟಕ ಹಾಗೂ ಗೋವಾ ರಾಜ್ಯಗಳ ಕಾರ್ಮಿಕರನ್ನು ಕರೆದೊಯ್ಯಲು ವ್ಯವಸ್ಥೆ ಮಾಡಲಾಗಿದ್ದ ವಿಶೇಷ ಶ್ರಮಿಕ್ ರೈಲು ಶನಿವಾರ ರಾತ್ರಿ ನಗರದ ರೈಲು ನಿಲ್ದಾಣದಿಂದ ಉತ್ತರ ಪ್ರದೇಶದ ಗೋರಖ್​ಪುರಕ್ಕೆ ತೆರಳಿತು.

ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ, ಸ್ವತಃ ರೈಲು ನಿಲ್ದಾಣಕ್ಕೆ ಆಗಮಿಸಿ ಕಾರ್ಮಿಕರಿಗೆ ಊಟ ಮತ್ತು ನೀರಿನ‌ ವ್ಯವಸ್ಥೆ ಕಲ್ಪಿಸಿರುವ ಬಗ್ಗೆ ಖಚಿತಪಡಿಸಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುರೇಶ್ ಅಂಗಡಿ, ಲಾಕ್​ಡೌನ್ ಹಿನ್ನೆಲೆಯಲ್ಲಿ ಸಾರಿಗೆ ಸೌಲಭ್ಯ ಇಲ್ಲದೇ ಸಂಕಷ್ಟಕ್ಕೆ ಒಳಗಾಗಿದ್ದ ಕರ್ನಾಟಕ ಹಾಗೂ ಗೋವಾ ರಾಜ್ಯಗಳ 1,700 ಕಾರ್ಮಿಕರನ್ನು ವಿಶೇಷ ಶ್ರಮಿಕ್​ ರೈಲು ಮೂಲಕ ಗೋರಖ್​ಪುರಕ್ಕೆ ಕಳುಹಿಸಿಕೊಡಲಾಗಿದೆ.

ಕಾರ್ಮಿಕರನ್ನು ಗುರುತಿಸಿ ಅವರ ಆರೋಗ್ಯ ತಪಾಸಣೆ ಮಾಡುವುದರ ಜತೆಗೆ ಪ್ರತಿಯೊಬ್ಬರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಜಿಲ್ಲಾಡಳಿತ, ಆರೋಗ್ಯ, ಪೊಲೀಸ್​ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರಂತರ ಪರಿಶ್ರಮದಿಂದ ಕಾರ್ಮಿಕರನ್ನು ಅವರ ತವರು ರಾಜ್ಯಕ್ಕೆ ಕಳುಹಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಶ್ರಮಿಕ್ ರೈಲು ಇಲ್ಲಿಂದ ಹೊರಟು ಜೂನ್ 1ರಂದು ಬೆಳಗ್ಗೆ 9 ಗಂಟೆಗೆ ಗೋರಖ್​ಪುರ ತಲುಪಲಿದೆ. ಅದೇ ದಿನ ಸಂಜೆ 5 ಗಂಟೆಗೆ ಅಲ್ಲಿಂದ ಮರಳಿ ಹೊರಟು ಜೂನ್ 3ರಂದು ಬೆಳಗ್ಗೆ 8 ಗಂಟೆಗೆ ಬೆಳಗಾವಿ ತಲುಪಲಿದೆ ಎಂದು ತಿಳಿಸಿದರು.

ಈ ವೇಳೆ ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಐಜಿಪಿ ರಾಘವೇಂದ್ರ ಸುಹಾಸ್, ಪೊಲೀಸ್ ಆಯುಕ್ತರಾದ ಬಿ‌.ಎಸ್.ಲೋಕೇಶ್ ಕುಮಾರ್ ಸೇರಿದಂತೆ ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details